Sunday, August 14, 2022

Latest Posts

ಕುಮಾರಸ್ವಾಮಿ ಜೋಕರ್ ಇದ್ದ ಹಾಗೆ: ಸಚಿವ ಸಿ.ಪಿ.ಯೋಗೇಶ್ವರ್

ಹೊಸದಿಗಂತ ವರದಿ, ಮಂಗಳೂರು:

ಮಾಜಿ ಸಿಎಂ ಕುಮಾರಸ್ವಾಮಿ ಅವರು ಅವಕಾಶವಾದಿ ರಾಜಕಾರಣಿ. ಕುಮಾರಸ್ವಾಮಿ ಒಂದು ತರಹ ಜೋಕರ್ ಇದ್ದಹಾಗೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕುಮಾರಸ್ವಾಮಿ ಯಾವ ಪಾರ್ಟಿಯಾದರೂ ಅಡ್ಜೆಸ್ಟ್ ಮೆಂಟ್ ಆಗುತ್ತಾರೆ. ಕುಮಾರಸ್ವಾಮಿ ಅವರಿಗೆ ನೈತಿಕತೆ, ಸಿದ್ದಾಂತ ಯಾವುದೂ ಇಲ್ಲ. ಸಿಎಂ ಆಗಿದ್ದಾಗ ಕುಮಾರಸ್ವಾಮಿ ಉಡಾಫೆಯಾಗಿ ವರ್ತಿಸಿದ್ದರು. ಕುಮಾರಸ್ವಾಮಿಯವರಿಗೆ ಈಗ ಆತಂಕ ಕಾಡುತ್ತಿದೆ. ದಿನಬೆಳಗೆದ್ದು ಕುಮಾರಸ್ವಾಮಿ ಜನರ ಕಡೆ ಹೋಗುತ್ತಿದ್ದಾರೆ. ಅಧಿಕಾರ ಇದ್ದಾಗ ಏನೂ ಮಾಡಲಿಲ್ಲ ಎಂದರು.

ಅಧಿಕಾರ ಇಲ್ಲದಾಗ ಜನರ ಬಳಿ ಹೋಗಿ ಗೋಳಾಡುವುದು, ಕಣ್ಣೀರು ಹಾಕುವುದು ಅವರ ಗುಣವಾಗಿಬಿಟ್ಟಿದೆ. 2023 ರ ಚುನಾವಣೆಯಲ್ಲಿ ಮೈಸೂರು ಪ್ರಾಂತ್ಯದಲ್ಲಿ ಬಿಜೆಪಿಗೆ ಬಹುಮತ ಸಿಗಲಿದೆ. ಈ ಮೂಲಕ ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಸಂಪೂರ್ಣ ನೆಲಕಚ್ಚುತ್ತದೆ ಎಂಬ ವಿಚಾರ ಅರಿತು ಮಾಜಿ ಸಿಎಂ ಕುಮಾರಸ್ವಾಮಿ ಆತಂಕದಲ್ಲಿದ್ದಾರೆ ಎಂದು ಯೋಗೇಶ್ವರ್ ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss