ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮ್ಮ ಕುಟುಂಬದವರನ್ನು ಅಧಿಕಾರಕ್ಕೆ ತರಲು ದೇವೇಗೌಡರ ಕುಟುಂಬ ನರಬಲಿ ಮಾಡುತ್ತಿದೆ ಎಂದು ಮಾಜಿ ಸಂಸದ ಶಿವರಾಮೇಗೌಡ ವಾಗ್ದಾಳಿ ನಡೆಸಿದ್ದಾರೆ.
ಮಂಡ್ಯದ ನಾಗಮಂಗಲದಲ್ಲಿ ಮಾತನಾಡಿದ ಅವರು, ಡಾ.ಮಂಜುನಾಥ್ ಅಭ್ಯರ್ಥಿ ಮಾಡಲು ಯೋಗೇಶ್ವರ್ ಶ್ರಮವಹಿಸಿದರು. ಆದರೆ, ಚನ್ನಪಟ್ಟಣದಲ್ಲಿ ಯೋಗೇಶ್ವರ್ ಅವರನ್ನೇ ಬಲಿ ಪಡೆದಿದ್ದಾರೆ. ತಮ್ಮ ಕುಟುಂಬದವರನ್ನು ಅಧಿಕಾರಕ್ಕೆ ತರಲು ದೇವೇಗೌಡರ ಕುಟುಂಬ ನರಬಲಿ ಪಡೆಯುತ್ತಾರೆ. “ಚನ್ನಪಟ್ಟಣದ ಜನರು ಮೂರ್ಖರಲ್ಲ, ಯೋಗೇಶ್ವರ್ ಗೆಲುವು ನಿಶ್ಚಿತ ” ಎಂದು ಶಿವರಾಮೇಗೌಡ ಭವಿಷ್ಯ ನುಡಿದಿದ್ದಾರೆ.