ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಟಿಕೆಟ್ ವಿಚಾರವಾಗಿ ಕುಮಾರಸ್ವಾಮಿ ಹೇಳಿದ್ದೇ ಅಂತಿಮ ಎಂದು ಜೆಡಿಎಸ್ ಮುಖಂಡ ಎಚ್.ಡಿ. ರೇವಣ್ಣ ಹೇಳಿದ್ದಾರೆ.
ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿದ ಅವರು, ಕುಮಾರಸ್ವಾಮಿ ಮತ್ತು ನಾನು ಹೊಡೆದಾಡಿಕೊಂಡಿದ್ದೇವೆ ಎಂದು ಕೆಲವರು ಭ್ರಮನಿರಸನಗೊಂಡು ಮಾತನಾಡುತ್ತಿದ್ದಾರೆ. ದೇವೇಗೌಡರು, ಕುಮಾರಸ್ವಾಮಿ, ಸಿ.ಎಂ. ಇಬ್ರಾಹಿಂ ಮತ್ತು ನಾನು ಸೇರಿ ಟಿಕೆಟ್ ಫೈನಲ್ ಮಾಡುತ್ತೇವೆ ಎಂದರು.
ಭವಾನಿ ರೇವಣ್ಣ ಅವರು ಪೂಜೆಯ ಸಂದರ್ಭ ಏನೋ ಹೇಳಿಕೆ ಕೊಟ್ಟಿದ್ದಾರೆಯೇ ಹೊರತು ಮಾಧ್ಯಮಗಳ ಮುಂದೆ ಹೇಳಿಲ್ಲ. ಟಿಕೆಟ್ ಸಿಕ್ಕಿದರೆ ಅವರು ಸ್ಪರ್ಧಿಸುತ್ತಾರೆ. ಆದರೆ ಟಿಕೆಟ್ ಗೊಂದಲಕ್ಕೆ ಅವರು ತೆರೆ ಎಳೆದಿದ್ದಾರೆ. ಕುಮಾರಸ್ವಾಮಿ ಮತ್ತು ನಾಯಕರು ಜೆಡಿಎಸ್ ಟಿಕೆಟ್ ವಿಚಾರವಾಗಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದವರು ತಿಳಿಸಿದರು.