ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಕ್ಕೆಲ್ಲಾ ಉತ್ತರ ಕೊಡುತ್ತಾ ಕೂರಲು ಸಮಯವಿಲ್ಲ. ಸರ್ಕಾರ ಎಲ್ಲಾ ವಿಚಾರಗಳನ್ನು ಸಮರ್ಥವಾಗಿಯೇ ಎದುರಿಸಿ ಪರಿಹರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಗಂಡಸ್ತನದ ವಿಚಾರದ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಆಡಿರುವ ಮಾತುಗಳಿಗೆ ಪ್ರತಿಕ್ರಿಯೆ ನೀಡುವ ಅವಶ್ಯಕತೆ ಇಲ್ಲ. ಅವರು ಹೇಳಿರುವ ರೀತಿಯಲ್ಲಿ ಗಂಡಸ್ತನದ ಪ್ರಶ್ನೆಯೂ ಬರುವುದಿಲ್ಲ. ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಸರ್ಕಾರ ಉತ್ತಮ ಕಾನೂನು ಸುವ್ಯವಸ್ಥೆ ಇರುವುದನ್ನು ನಿರೂಪಿಸಿದೆ. ಹಲಾಲ್ ಕಟ್ ವಿಚಾರವನ್ನೂ ಅದೇ ರೀತಿಯಲ್ಲಿ ನಿರ್ವಹಣೆ ಮಾಡಲಾಗುವುದು. ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಕಾಪಾಡುವುದು ನನ್ನ ಕರ್ತವ್ಯ. ಅದನ್ನು ಮಾಡುತ್ತೇನೆ ಎಂದು ಬೊಮ್ಮಾಯಿ ಸ್ಪಷ್ಟಪಡಿಸಿದರು.