ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, May 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮಾಜಿ ಸಿಎಂ ಕುಮಾರಸ್ವಾಮಿಗೆ ಕೊರೋನಾ ಪಾಸಿಟಿವ್: ಬೆಡ್ ಸಿಗದೇ ಪರದಾಟ!

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಲು ಬೆಡ್ ಸಿಗದೇ ಪರದಾಡಿದ್ದಾರೆ.
ಬಸವಕಲ್ಯಾಣ ಚುನಾವಣಾ ಪ್ರಚಾರ ಮುಗಿಸಿ ಬಂದ ನಂತರ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಮನೆಗೆ ಹೋಗದೇ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದರು. ನಂತರ ಆರೋಗ್ಯ ತಪಾಸಣೆ ಮಾಡಿಸಿದಾಗ ಕೊರೋನಾ ಪಾಸಿಟಿವ್ ಇರುವುದು ತಿಳಿದಿದೆ. ವೈದ್ಯರು ಆಸ್ಪತ್ರೆಗೆ ದಾಖಲಾಗಲು ತಿಳಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಬೆಡ್ ಲಭ್ಯವಿಲ್ಲದ ಕಾರಣ ತೋಟದ ಮನೆಯಲ್ಲಿ ವಿಶ್ರಾಂತಿ ಪಡೆಯಬಹುದೇ ಎಂದು ಕೇಳಿದ್ದಾರೆ. ಆದರೆ ಕುಟುಂಬ ವೈದ್ಯರು ಒಪ್ಪಿಗೆ ನೀಡಿಲ್ಲ. ಇದಾದ ನಂತರ ವಿಷಯ ತಿಳಿದ ಸಚಿವ ಡಾ. ಸುಧಾಕರ್, ಕುಮಾರಸ್ವಾಮಿ ಅವರನ್ನು ಸಂಪರ್ಕಿಸಿ ಮಾಹಿತಿ ಪಡೆದು ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ವ್ಯವಸ್ಥೆ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss