Friday, July 1, 2022

Latest Posts

ಕುಮಾರಸ್ವಾಮಿ ವಿರುದ್ಧ ಜಮೀರ್ ಹೇಳಿಕೆ ವೈಯಕ್ತಿಕ: ಪಕ್ಷಕ್ಕೆ ಯಾವುದೇ ಸಂಬಂಧ ಇಲ್ಲ ಎಂದ ಡಿ.ಕೆ.ಶಿವಕುಮಾರ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ -ಜಮೀರ್ ಅಹಮದ್ ಅವರು ನಡುವಿನ ವಿಚಾರ ವೈಯಕ್ತಿಕವಾದದ್ದು. ಅವರ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ‘ಪಕ್ಷದ ಶಾಸಕರಾಗಲಿ, ನಾಯಕರಾಗಲಿ ಅಥವಾ ಕಾರ್ಯಕರ್ತರಾಗಲಿ ಮತ್ತೊಬ್ಬರ ವಿರುದ್ಧ ಟೀಕೆ ಮಾಡುವಾಗ ಎಚ್ಚರಿಕೆಯಿಂದ ಇರಬೇಕು. ವೈಯಕ್ತಿಕ ವಿಚಾರಗಳಿಗೆ ಹೋಗಬಾರದು. ಜಾತಿ, ಧರ್ಮ ಸೇರಿದಂತೆ ಯಾವುದೇ ಭಾವನೆಗಳಿಗೆ ಧಕ್ಕೆ ತರಬಾರದು. ಟೀಕಿಸುವ ಭರದಲ್ಲಿ ಗೌರವದ ಎಲ್ಲೆ ಮೀರಬಾರದು ಎಂದು ಶಿವಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಜಮೀರ್ ಅಹಮದ್ ಅವರು ಮುಂದಿನ ದಿನಗಳಲ್ಲಿ ಇಂತಹ ಟೀಕೆ, ಹೇಳಿಕೆ ನೀಡುವ ಮುನ್ನ ತಾವು ಒಂದು ಪಕ್ಷದ ಪ್ರತಿನಿಧಿ ಎಂಬುದನ್ನು ಮರೆಯಬಾರದು. ಇದು ಪುನಾರವರ್ತನೆ ಆಗದಂತೆ ನೋಡಿಕೊಳ್ಳಬೇಕು ಎಂದುಸೂಚನೆ ನೀಡಿದ್ದಾರೆ.
ಕಳೆದ ಗುರುವಾರ ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರ ವ್ಯಾಪ್ತಿಯ ಸರ್ವ ಧರ್ಮೀಯರಿಗೆ ಆಹಾರದ ಕಿಟ್ ಹಾಗೂ 5000 ರೂ. ನಗದು ಪರಿಹಾರ ನೀಡಿದ ಸಂದರ್ಭ ಮಾಧ್ಯಮಗಳಿಗೆ ಮಾತನಾಡಿದ್ದ ಜಮೀರ್ ಅಹಮದ್, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಮಾತಿನ ಭರದಲ್ಲಿ ಕುಮಾರಸ್ವಾಮಿ ವಿರುದ್ಧ ಏಕವಚನ ಪ್ರಯೋಗ ಮಾಡಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss