ಬರುವ ದಿನಗಳಲ್ಲಿ ಕುಮಾರಸ್ವಾಮಿ ನೂರಕ್ಕೆ ನೂರಷ್ಟು ಮುಖ್ಯಮಂತ್ರಿ ಆಗುತ್ತಾರೆ: ಜಿ.ಟಿ. ದೇವೆಗೌಡ ಭವಿಷ್ಯ

ಹೊಸದಿಗಂತ ವರದಿ, ಹುಬ್ಬಳ್ಳಿ:

ಅಭಿವೃದ್ಧಿ ಹಾಗೂ ಇನ್ನಿತರ ವಿಚಾರವಾಗಿ ಕಾಂಗ್ರೆಸ್ ನಾಯಕರಲ್ಲಿ ಸಾಕಷ್ಟು ಅಸಮಾಧಾನವಿದೆ. ಕಾಂಗ್ರೆಸ್‌ನವರಿಂದ ಆ ಸರ್ಕಾರ ಬಿಳುತ್ತದೆ. ಬರುವ ದಿನಗಳಲ್ಲಿ ಕುಮಾರಸ್ವಾಮಿ ನೂರಕ್ಕೆ ನೂರಷ್ಟು ಮುಖ್ಯಮಂತ್ರಿ ಆಗುತ್ತಾರೆ ಎಂದು ಶಾಸಕ ಜಿ.ಟಿ. ದೇವೆಗೌಡ ಭವಿಷ್ಯ ನುಡಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಬಿ.ಆರ್.ಪಾಟೀಲ, ರಾಜು ಕಾಗೆ, ಕಂಪ್ಲಿ ಗಣೇಶ ಹಾಗೂ ಬಸವರಾಜ ರಾಯರೆಡ್ಡಿ ಸರ್ಕಾರದ ವಿರುದ್ಧ ಮಾತನಾಡಿದ್ದಾರೆ. ಕಂಪ್ಲಿ ಗಣೇಶ ಪ್ರತಿಯೊಂದ ಕಾಮಗಾರಿಗೂ ಮಂತ್ರಿಗಳ ಕಡೆ ಹಾಗೂ ರಾಯರೆಡ್ಡಿ ಅಂತೂ ಸರ್ಕಾರದ ಮೇಲೆ ಮುಗಿಬಿದ್ದಿದ್ದಾರೆ ಎಂದರು.

ಕಾಂಗ್ರೆಸ್ ನಾಯಕರು ಜೆಡಿಎಸ್ ದಕ್ಷಿಣ ಕರ್ನಾಟಕಕ್ಕೆ ಕೇವಲ ಸೀಮಿತವಾಗಿದೆ ಎಂದು ಬಿಂಬಿಸಿದ್ದರು. ಆದರೆ ನಾವು ಕಲ್ಯಾಣ ಹಾಗೂ ಕಿತ್ತೂರ ಕರ್ನಾಟಕ ಭಾಗದಲ್ಲಿ ಬಲಿಷ್ಠವಾಗಿದ್ದೇವೆ. ಈ ಭಾಗದಲ್ಲಿ ಜೆಡಿಎಸ್ ಮತ್ತೆ ಪುನಶ್ಚೇತನ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಬಿಜೆಪಿ ಯಡಿಯೂರಪ್ಪ , ಬಸವರಾಜ ಬೊಮ್ಮಾಯಿ ಹಾಗೂ ಕುಮಾರಸ್ವಾಮಿ ಅವರು ಇದ್ದಾಗ ರೈತರ ಪಂಪಸೆಟ್‌ಗೆ ಏಳು ಗಂಟೆ ನಿರಂತರ ನೀರು ಬಿಡುತ್ತಿದ್ದರು. ಈಗ ರಾಜ್ಯದಲ್ಲಿ ಇಷ್ಟು ಬರಗಾಲ ಆವರಿಸಿದರೂ ಸಹ ಕಾಂಗ್ರೆಸ್ ಸರಿಯಾಗಿ ಮೂರು ಗಂಟೆ ವಿದ್ಯುತ್ ಕೊಡುತ್ತಿಲ್ಲ ಎಂದು ಹರಿಹಾಯ್ದರು.

ಐದು ಗ್ಯಾರಂಟಿ ನೀಡುವಲ್ಲಿ ವಿಫಲವಾಗಿದೆ. ಇವತ್ತಿನ ವರೆಗೂ ಬೆಳೆ ಪರಿಹಾರ ನೀಡಿಲ್ಲ. ರೈತರು ಸತ್ತ ಮೇಲೆ ಅನ್ನ ಭಾಗ್ಯ ನೀಡುತ್ತಿರಾ? ಅನ್ನ ಭಾಗ್ಯ ಯೋಜನೆ ಕಾಂಗ್ರೆಸ್ ಶ್ಯೂನ್ಯ ಸಾಧನೆ ಎಂದು ಆರೋಪಿಸಿದರು.

ಲೋಕಸಭಾ ಚುನಾವಣೆ ದೃಷ್ಠಿಯಿಂದ ಮೈತ್ರಿಯಾಗಿದ್ದೇವೆ. ಮೋದಿ ದೇಶವನ್ನು ಅಭಿವೃದ್ಧಿಗೊಳಿಸುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ತೆಗೆದು ಕುಮಾರಸ್ವಾಮಿ ಅವರನ್ನು ಸಿಎಂ ಮಾಡಬೇಕು ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!