ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣಿಸಿಕೊಂಡಿದ್ದು, ಅವರನ್ನು ಐಸಿಯುನಿಂದ ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ ಎಂದು ಅಪೊಲೋ ಆಸ್ಪತ್ರೆಯ ವೈದ್ಯರು ಆರೋಗ್ಯ ಬುಲೆಟಿನ್ ಮೂಲಕ ಮಾಹಿತಿ ನೀಡಿದ್ದಾರೆ.
ಬುಧವಾರ ಮುಂಜಾನೆ 3.45 ವೇಳೆಗೆ ಆಸ್ಪತ್ರೆಗೆ ಬಂದಿದ್ದ ಕುಮಾರಸ್ವಾಮಿ ಅವರಿಗೆ ಸಣ್ಣ ಪ್ರಮಾಣದಲ್ಲಿ ಸ್ಟ್ರೋಕ್ ಆಗಿತ್ತು. ಈಗ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಅಪಾಯದಿಂದ ಪಾರಾಗಿದ್ದಾರೆ. ಈಗ ಜನರಲ್ ವಾರ್ಡ್ ಗೆ ಶಿಫ್ಟ್ ಮಾಡಿದ್ದೇವೆ. ಇನ್ನೂ 2-3 ದಿನ ಆಸ್ಪತ್ರೆಯಲ್ಲಿಯೇ ಇರಬೇಕಾಗುತ್ತದೆ. ಈಗ ಅವರು ಎಲ್ಲರ ಜೊತೆಯಲ್ಲೂ ಮಾತನಾಡುತ್ತಿದ್ದಾರೆ. ಆರೋಗ್ಯವಾಗಿದ್ದಾರೆ ಯಾವುದೇ ತೊಂದರೆ ಇಲ್ಲ ಎಂದು ಆಸ್ಪತ್ರೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.