ರಿಲಯನ್ಸ್ ಇಂಡಸ್ಟ್ರೀಸ್ ಸ್ವತಂತ್ರ ನಿರ್ದೇಶಕರಾಗಿ ಕುಂದಾಪುರದ ಕೆ.ವಿ. ಕಾಮತ್ ನೇಮಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕುಂದಾಪುರ ಮೂಲದ ಕೆ.ವಿ. ಕಾಮತ್ ಅವರು ರಿಲಯನ್ಸ್ ಇಂಡಸ್ಟ್ರೀಸ್‌ನ ಸ್ವತಂತ್ರ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಅನುಭವಿ ಇವರಾಗಿದ್ದು, ಐದು ವರ್ಷಗಳ ಅವಧಿಗೆ ರಿಲಯನ್ಸ್ ಇಂಡಸ್ಟ್ರೀಸ್ ಸ್ವತಂತ್ರ ನಿರ್ದೇಶಕರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಐಐಎಂ ಅಹಮದಾಬಾದ್‌ನ ಪದವೀಧರರಾದ ಕೆ.ವಿ. ಕಾಮತ್ ಅವರು ಖ್ಯಾತ ಬ್ಯಾಂಕರ್ ಆಗಿದ್ದಾರೆ. ಈಗಾಗಲೇ ಐಸಿಐಸಿಐ, ಏಷ್ಯನ್ ಡೆವಲಪ್‌ಮೆಂಟ್ಸ್ ನಲ್ಲಿ ಕಾರ್ಯನಿರ್ವಹಿಸಿದ್ದಾರೆ. 1996ರಲ್ಲಿ ಐಸಿಐಸಿಐಗೆ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಆಗಿ ನಿವೃತ್ತರಾಗಿದ್ದಾರೆ. ೨೦೧೫ರವರೆಗೂ ಐಸಿಐಸಿಐ ಬ್ಯಾಂಕ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.

ರಿಲಯನ್ಸ್ ಇಂಡಸ್ಟ್ರೀಸ್ ನಿರ್ದೇಶಕರ ಮಂಡಳಿಯು ಸಭೆ ನಡೆಸಿ ಮಾನವ ಸಂಪನ್ಮೂಲ, ನಾಮನಿರ್ದೇಶನ ಮತ್ತು ಸಂಭಾವನೆ ಸಮಿತಿಯ ಶಿಫಾರಸಿನ ಆಧಾರದ ಮೇಲೆ ಕೆ.ವಿ. ಕಾಮರ್ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!