ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಬೆಂಕಿ ಅವಘಡದಲ್ಲಿ ಮೃತಪಟ್ಟವರ ಕುರಿತು ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
‘ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಿಂದ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ಈ ಕಷ್ಟದ ಸಮಯದಲ್ಲಿ ಸಂತ್ರಸ್ತ ಜನರು ಮತ್ತು ಅವರ ಕುಟುಂಬಗಳೊಂದಿಗೆ ನನ್ನ ಪ್ರಾರ್ಥನೆ ಇದೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಮೋದಿ ಪಿಎಂಎನ್‌ಆರ್‌ಎಫ್‌ನಿಂದ ಮೃತರ ಸಂಬಂಧಿಕರಿಗೆ 2 ಲಕ್ಷ ರೂ.ಗಳ ಪರಿಹಾರವನ್ನು ಹಾಗೂ ಗಾಯಾಳುಗಳಿಗೆ 50,000 ರೂ.ಗಳನ್ನು ನೀಡಲಾಗುವುದು ಎಂದು ಹೇಳಿದರು.
ಕರ್ನೂಲು ಜಿಲ್ಲೆಯ ಚಿನ್ನಟೇಕೂರು ಬಳಿ ಹೈದರಾಬಾದ್ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ.

