ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಬಸ್ ದುರಂತದಲ್ಲಿ 20 ಮಂದಿ ಸಜೀವ ದಹನವಾಗಿದ್ದು, ದುರ್ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ , ಆಂಧ್ರಪ್ರದೇಶದ ಕರ್ನೂಲ್‌ನ ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಬಸ್‌ಗೆ ಬೆಂಕಿ ತಗುಲಿ ಹಲವು ಪ್ರಯಾಣಿಕರು ಪ್ರಾಣ ಕಳೆದುಕೊಂಡ ಸುದ್ದಿ ಕೇಳಿ ಅತೀವ ದುಃಖವಾಯಿತು. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆಂದು ಹೇಳಿದ್ದಾರೆ.
ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಟ್ವೀಟ್ ಮಾಡಿ, ಹೈದರಾಬಾದ್-ಬೆಂಗಳೂರು ಮಾರ್ಗದ ಕರ್ನೂಲ್ ಬಳಿ ಭೀಕರ ಬಸ್ ಬೆಂಕಿ ದುರಂತ ಘಟನೆ ಬಗ್ಗೆ ತಿಳಿದು ತೀವ್ರ ಆಘಾತ ಮತ್ತು ದುಃಖವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಬಾಧಿತ ಎಲ್ಲರೊಂದಿಗೂ ನಾವು ನಿಲ್ಲುತ್ತೇವೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಪ್ರಾರ್ಥಿಸುತ್ತೇವೆಂದು ತಿಳಿಸಿದ್ದಾರೆ.

