ಹೊಸದಿಗಂತ ಡಿಜಿಟಲ್ ಡೆಸ್ಕ್:
20 ಜನರ ಸಾವಿಗೆ ಕಾರಣವಾದ ಕರ್ನೂಲು ಬಸ್ ಬೆಂಕಿ ದುರಂತಕ್ಕೆ ಸಂಬಂಧಿಸಿದಂತೆ ಇಬ್ಬರು ಚಾಲಕರ ವಿರುದ್ಧ ನಿರ್ಲಕ್ಷ್ಯ ಮತ್ತು ಅತಿವೇಗದ ಚಾಲನೆ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಬಸ್ ದುರಂತದಲ್ಲಿ ಬದುಕುಳಿದವರಲ್ಲಿ ಒಬ್ಬರಾದ ಎನ್ ರಮೇಶ್ ನೀಡಿದ ದೂರಿನ ಆಧಾರದ ಮೇಲೆ, ಕರ್ನೂಲ್ ಜಿಲ್ಲೆಯ ಉಲಿಂದಕೊಂಡ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಶುಕ್ರವಾರ ಬೆಳಗಿನ ಜಾವ ಬೆಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಬೆಂಕಿ ಹೊತ್ತಿಕೊಂಡಿತು. 20 ಜನರು ಸಾವನ್ನಪ್ಪಿದ್ದರು.

