CINE| ವಿಜಯ್ ಅಭಿಮಾನಿಗಳಿಗೆ ಸಂತಸದ ಸುದ್ದಿ: ಖುಷಿ ಸಿನಿಮಾದಿಂದ ಮೊದಲ ಹಾಡು ಔಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

‘ಖುಷಿ’ ಚಿತ್ರದಲ್ಲಿ ವಿಜಯ್ ದೇವರಕೊಂಡ ಮತ್ತು ಸಮಂತಾ ನಟಿಸುತ್ತಿದ್ದಾರೆ. ರೊಮ್ಯಾಂಟಿಕ್ ಕಾಮಿಡಿ ಎಂಟರ್‌ಟೈನರ್ ಆಗಿರುವ ಈ ಚಿತ್ರವನ್ನು ಶಿವ ನಿರ್ವಾಣ ನಿರ್ದೇಶಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಚಿತ್ರದ ಪ್ರಚಾರವನ್ನು ಚಿತ್ರತಂಡ ಆರಂಭಿಸಿದೆ.

ವಿಜಯ್ ದೇವರಕೊಂಡ ಹುಟ್ಟುಹಬ್ಬದ ಪ್ರಯುಕ್ತ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಲಾಗಿದೆ. ಮಲಯಾಳಂ ಸಂಗೀತ ನಿರ್ದೇಶಕ ಹೇಶಮ್ ಅಬ್ದುಲ್ ವಹಾಬ್ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಪ್ಯಾನ್ ಇಂಡಿಯಾ ಚಲನಚಿತ್ರವಾಗಿ ತಯಾರಾಗುತ್ತಿರುವ ಕಾರಣ ತೆಲುಗು ಜೊತೆಗೆ ತಮಿಳು, ಮಲಯಾಳಂ, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಮೊದಲ ಹಾಡನ್ನು ಬಿಡುಗಡೆ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!