Saturday, April 1, 2023

Latest Posts

ವಿಮಾನ ನಿಲ್ದಾಣಕ್ಕೆ ಕುವೆಂಪು, ರೈಲ್ವೆ ನಿಲ್ದಾಣಕ್ಕೆ ಕೆಳದಿ ಶಿವಪ್ಪ ನಾಯಕ ಹೆಸರು ಅಂತಿಮ

ಹೊಸದಿಗಂತ ವರದಿ ಶಿವಮೊಗ್ಗ:

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹಾಗೂ ರೈಲ್ವೆ ನಿಲ್ದಾಣಕ್ಕೆ ಕೆಳದಿ ಶಿವಪ್ಪ ನಾಯಕ ಅವರ ಹೆಸರುಗಳು ನಾಮಕರಣ ಆಗಲಿದೆ. ಈ ಸಂಬಂಧ ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಮಾಹಿತಿ ನೀಡಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಈ ಹಿಂದೆ ಬಿ.ಎಸ್.ಯಡಿಯೂರಪ್ಪ ಅವರ ಹೆಸರು ಇಡಲು ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ ಸ್ವತಃ ಯಡಿಯೂರಪ್ಪ ಅವರೇ ತಮ್ಮ ಹೆಸರು ವಿಮಾನ ನಿಲ್ದಾಣಕ್ಕೆ ಇಡುವುದು ಬೇಡ ಎಂದು ಸೂಚಿಸಿದ್ದರು. ಜೊತೆಗೆ ಜಿಲ್ಲೆಯ ಜ್ಞಾನ ಶಿಖರ, ಜ್ಞಾನಪೀಠ ಪುರಸ್ಕೃತ ಸಾಹಿತಿ ಕುವೆಂಪು ಅವರ ಹೆಸರನ್ನು ಇಡಬೇಕೆಂದು ಅಪೇಕ್ಷೆ ವ್ಯಕ್ತಪಡಿಸಿದ್ದರು. ಅದಕ್ಕೆ ಅನುಸಾರವಾಗಿ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಮಾನ ನಿಲ್ದಾಣಕ್ಕೆ ಕುವೆಂಪು ಅವರ ಹೆಸರನ್ನು ಇಡಲು ನಿರ್ಣಯ ಕೈಗೊಂಡು, ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತಿದೆ ಎಂದು ತಿಳಿಸಿದರು.

ದೇಶದ 50 ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಲು ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ. ಅದರಲ್ಲಿ ನಮ್ಮ ಜಿಲ್ಲೆಯ ಶಿವಮೊಗ್ಗ, ಸಾಗರ ಹಾಗೂ ತಾಳಗುಪ್ಪ ರೈಲ್ವೆ ನಿಲ್ದಾಣಗಳು ಸೇರಿವೆ. ಇದರಲ್ಲಿ ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ಕಂದಾಯದ ಶಿಸ್ತಿಗೆ ಹೆಸರುವಾಸಿ ಆಗಿರುವ, ಜಿಲ್ಲೆಯ ಹೆಮ್ಮೆಯ ಕೆಳದಿ ಶಿವಪ್ಪ ನಾಯಕ ಅವರ ಹೆಸರನ್ನು ಇಡಲು ನಿರ್ಣಯ ಕೈಗೊಳ್ಳಲಾಗಿದೆ ಎಂದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!