ಕುವೆಂಪು ವಿವಿ ಘಟಿಕೋತ್ಸವ: ಆರು ಮಂದಿಗೆ ಗೌರವ ಡಾಕ್ಟರೇಟ್

ಹೊಸದಿಗಂತ ವರದಿ ಶಿವಮೊಗ್ಗ: 

ಕುವೆಂಪು ವಿಶ್ವವಿದ್ಯಾಲಯದಲ್ಲಿ ಇದೇ ಮೊದಲ ಬಾರಿಗೆ ಎರಡು ಘಟಿಕೋತ್ಸವಗಳು ಒಟ್ಟಿಗೇ ನಡೆಯಲಿದೆ. ಜೂನ್ 16ರ ಬೆಳಿಗ್ಗೆ 10ಗಂಟೆಗೆ ವಿವಿ ಸಭಾಂಗಣದಲ್ಲಿ ಘಟಿಕೋತ್ಸವ ಸಮಾರಂಭ ಜರುಗಲಿದೆ. 31 ಮತ್ತು 32ನೇ ಘಟಿಕೋತ್ಸವದಲ್ಲಿ ಸಾರ್ವಜನಿಕ ಆಡಳಿತದಲ್ಲಿ ಅಪಾರ ಸೇವೆ ಸಲ್ಲಿಸಿರುವ ವಿಧಾನಪರಿಷತ್ ಮಾಜಿ ಸಭಾಪತಿ ಡಿ.ಹೆಚ್.ಶಂಕರಮೂರ್ತಿ ಸೇರಿದಂತೆ ಒಟ್ಟು ಆರು ಮಂದಿಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಲಾಗಿದೆ ಎಂದು ವಿವಿ ಕುಲಪತಿ ಪ್ರೊ.ವೀರಭದ್ರಪ್ಪ ತಿಳಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, 31ನೇ ಘಟಿಕೋತ್ಸವದ ಭಾಗವಾಗಿ ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಹೆಚ್.ಶಂಕರಮೂರ್ತಿ, ಶಿಕ್ಷಣ ತಜ್ಞೆ ಗೀತಾ ನಾರಾಯಣನ್ ಹಾಗೂ ಯೋಗ ಗುರು ಭ.ಮ. ಶ್ರೀಕಂಠ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು. 32ನೇ ಘಟಿಕೋತ್ಸವದ ಭಾಗವಾಗಿ ವಿಶ್ರಾಂತ ಕುಲಪತಿ ಪ್ರೊ.ಟಿ.ವಿ.ಕಟ್ಟಿಮನಿ, ಅಂಧ ಕ್ರಿಕೆಟಿಗ ಮಹಾಂತೇಶ್ ಜಿ. ಕಿವಡಸಣ್ಣವರ್, ಯೋಗ ಗುರು ಬಾ.ಸು.ಅರವಿಂದ ಅವರಿಗೆ ಗೌರವ ಡಾಕ್ಟರೇಟ್ ನೀಡುವುದಾಗಿ  ಮಾಹಿತಿ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!