ಕುವೈತ್ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ 5 ಲಕ್ಷ ರೂ. ನೆರವು ಘೋಷಿಸಿದ ಕೇರಳ..!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕುವೈತ್‌ನ ವಸತಿ ಕಟ್ಟಡದಲ್ಲಿ ಸಂಭವಿಸಿದ ಭಾರೀ ಅಗ್ನಿ ದುರಂತದಲ್ಲಿ ಸಾವನ್ನಪ್ಪಿದ ಮತ್ತು ಗಾಯಗೊಂಡವರ ಕುಟುಂಬಗಳಿಗೆ ನೆರವು ನೀಡುವ ಪ್ರಯತ್ನಗಳನ್ನು ಸಂಘಟಿಸಲು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರು ತುರ್ತಾಗಿ ಕುವೈತ್‌ಗೆ ತೆರಳಲಿದ್ದಾರೆ ಎಂದು ರಾಜ್ಯ ಸರ್ಕಾರ ಗುರುವಾರ ತಿಳಿಸಿದೆ.

ಇಂದು ಬೆಳಿಗ್ಗೆ ನಡೆದ ವಿಶೇಷ ಕ್ಯಾಬಿನೆಟ್ ಸಭೆಯ ನಂತರ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರವು ಜೂನ್ 12 ರಂದು ಕುವಾಟಿಯ ಮಂಗಾಫ್ ನಗರದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಮೃತರ ಕುಟುಂಬಗಳಿಗೆ ರೂ 5 ಲಕ್ಷ ಮತ್ತು ಗಾಯಗೊಂಡವರಿಗೆ ರೂ 1 ಲಕ್ಷ ಪರಿಹಾರವನ್ನು ಘೋಷಿಸಿದೆ. ಭಾರೀ ಬೆಂಕಿ ಅವಘಡದಲ್ಲಿ 40 ಕ್ಕೂ ಹೆಚ್ಚು ಭಾರತೀಯರು ಸಾವನ್ನಪ್ಪಿದ್ದಾರೆ.

ಅಗ್ನಿ ಅವಘಡದಲ್ಲಿ ಮೃತಪಟ್ಟ ಕೇರಳದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಸಚಿವ ಸಂಪುಟ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!