ಹೊಸದಿಗಂತ ಡಿಜಿಟಲ್ ಡೆಸ್ಕ್:
ಕುವೈತ್ನ ಮುಂಗಾಫ್ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೃತಪಟ್ಟ 45 ಭಾರತೀಯರ ಶವಗಳೊಂದಿಗೆ ವಾಯು ಸೇನಾ ವಿಮಾನ ಕೊಚ್ಚಿಗೆ ಬಂದಿಳಿದಿದೆ.
ಸಿ-130ಜೆ ವಿಮಾನವು ಜೂನ್ 13ರಂದು ಕುವೈತ್ಗೆ ಹೊರಟಿತ್ತು. ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈಗ ಮೃತರ ಸಂಖ್ಯೆ 46ಕ್ಕೆ ಏರಿಕೆ, ಇದೀಗ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಹೋಗಿರುವ ವಿಮಾನ ಬಳಿಕ ದೆಹಲಿಗೆ ತೆರಳಲಿದೆ.
ಕುವೈತ್ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರಲ್ಲಿ 33 ಮಂದಿ ಕೇರಳದವರು, ಈ ಮುಂಗಾಫ್ ಕಟ್ಟದಲ್ಲಿ 160 ಮಂದಿ ವಾಸವಾಗಿದ್ದರು, ಅಲ್ಲಿದ್ದವರಲ್ಲಿ ಬಹುತೇಕರು ವಲಸೆ ಕಾರ್ಮಿಕರು. ದಕ್ಷಿಣ ಭಾರತೀಯರಲ್ಲದೆ, ಉತ್ತರ ಪ್ರದೇಶದ ಮೂವರು, ಒಡಿಶಾದ ಇಬ್ಬರು ಮತ್ತು ಬಿಹಾರ, ಪಂಜಾಬ್, ಕರ್ನಾಟಕ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ಹರಿಯಾಣದಿಂದ ತಲಾ ಒಬ್ಬರು ಅಗ್ನಿ ದುರಂತದಲ್ಲಿ ಮೃತಪಟ್ಟಿದ್ದು, ಅವರ ಮೃತದೇಹಗಳನ್ನು ದೆಹಲಿ ವಿಮಾನ ನಿಲ್ದಾಣಕ್ಕೆ ಕೊಂಡೊಯ್ಯಲಾಗುತ್ತಿದೆ.