ಹೊಸದಿಗಂತ ಡಿಜಿಟಲ್ ಡೆಸ್ಕ್:
ಕುವೈತ್ ಅಗ್ನಿ ದುರಂತದಲ್ಲಿ ಭಾರತೀಯರು ಸಹಿತ 40ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಕುವೈತ್ (Kuwait) ಅಗ್ನಿ ದುರಂತದ ಕುರಿತು ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಸಂತಾಪದ ನುಡಿಗಳನ್ನು ಹಂಚಿಕೊಂಡಿದ್ದಾರೆ.
ಕುವೈತ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡ ಅತ್ಯಂತ ದುಃಖಕರವಾಗಿದೆ. ದುರಂತದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬದವರೊಂದಿಗೆ ನಾವಿದ್ದೇವೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಸಂತ್ರಸ್ತರಿಗೆ ಸಹಾಯ ಮಾಡಲು ಅಲ್ಲಿನ ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.
ಘಟನೆಯ ಕುರಿತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಕುವೈತ್ ನಗರದಲ್ಲಿ ಅಗ್ನಿ ದುರಂತದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. 40ಕ್ಕೂ ಹೆಚ್ಚು ಸಾವುಗಳು ಸಂಭವಿಸಿದ್ದು, 50ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ನಮ್ಮ ರಾಯಭಾರಿ ಶಿಬಿರಕ್ಕೆ ಹೋಗಿದ್ದಾರೆ. ನಾವು ಹೆಚ್ಚಿನ ಮಾಹಿತಿಗಾಗಿ ಕಾಯುತ್ತಿದ್ದೇವೆ ಎಂದು ತಿಳಿಸಿದ್ದಾರೆ.