ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 25 ಹುದ್ದೆಗಳ ನೇಮಕಾತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 25 ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಸ್ನಾತಕೋತ್ತರ ಪದವಿ, ಪಿಹೆಚ್.ಡಿ, ಎಂ.ಫಿಲ್‌ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಫೆಬ್ರವರಿ 24,2023ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 57,700/- ರಿಂದ 2,18,200/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಪ್ರಾಧ್ಯಾಪಕ ಹುದ್ದೆಗಳೀಗೆ ಅಭ್ಯರ್ಥಿಗಳನ್ನು ಅರ್ಹತೆ, ದಾಖಲೆ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಸಾಮಾನ್ಯ ಅರ್ಜಿದಾರರು 1000/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿದಾರರು ಆನ್‌ಲೈನ್‌ ಮೂಲಕ ಫೆಬ್ರವರಿ 24,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!