RECRUITMENT | ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಉದ್ಯೋಗಾವಕಾಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 25 ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಸ್ನಾತಕೋತ್ತರ ಪದವಿ, ಪಿಹೆಚ್‌ಡಿ, ಎಂ.ಫಿಲ್‌ ವಿದ್ಯಾರ್ಹತೆ ಜೊತೆಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 57,700/- ರಿಂದ 2,18,200/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿದಾರರು 1000/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-೧ರ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕಿರುತ್ತದೆ.

ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅರ್ಹತೆ, ಅನುಭವ, ದಾಖಲೆ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಮಾರ್ಚ್‌ 26,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!