ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂದು ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಭೇಟಿಯಾಗಿ ‘ಭಾರತ ರತ್ನ’ ಪ್ರಶಸ್ತಿಗೆ ಭಾಜನರಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಎನ್‌ಡಿಎಗೆ ಸೇರ್ಪಡೆಗೊಂಡ ಬಳಿಕ ಇದೇ ಮೊದಲ ಬಾರಿಗೆ ಬುಧವಾರ( ಫೆಬ್ರುವರಿ 8) ದೆಹಲಿಗೆ ಭೇಟಿ ನೀಡಿದ್ದ ನಿತೀಶ್ ಕುಮಾರ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದರು.