Sunday, April 18, 2021

Latest Posts

ಕೊರೋನಾ ಲಸಿಕೆಯ ಎರಡನೇ ಡೋಸ್ ಸ್ವೀಕರಿಸಿದ ಎಲ್. ಕೆ ಅಡ್ವಾಣಿ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಬಿಜೆಪಿ ಹಿರಿಯ ಮುಖಂಡ ಎಲ್. ಕೆ ಅಡ್ವಾಣಿ ಅವರು ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊರೋನಾ ಲಸಿಕೆಯ ಎರಡನೇ ಡೋಸ್ ಪಡೆದುಕೊಂಡಿದ್ದಾರೆ.
ಮಾರ್ಚ್ 9 ರಂದು ಅಡ್ವಾಣಿ ತಮ್ಮ ಮೊದಲ ಡೋಸ್ ಲಸಿಕೆ ತೆಗೆದುಕೊಂಡಿದ್ರು. ಇಂದು ಬೆಳಗ್ಗೆ ಪ್ರಧಾನಿ ಮೋದಿ ಕೂಡ ಏಮ್ಸ್​ನಲ್ಲಿ ಎರಡನೇ ಡೋಸ್​ ಲಸಿಕೆ ಪಡೆದುಕೊಂಡರು.
ಭಾರತದಲ್ಲಿ ಜನವರಿ 16ರಿಂದ ವಿಶ್ವದ ಅತೀ ದೊಡ್ಡ ಲಸಿಕೆ ಅಭಿಯಾನ ಶುರುವಾಯಿತು. ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿ ಮತ್ತು ಕೊರೋನಾ ವಾರಿಯರ್ಸ್​ಗೆ ಹಾಗೂ ಎರಡನೇ ಹಂತದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಮತ್ತು ಆರೋಗ್ಯ ಸಮಸ್ಯೆಯುಳ್ಳ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗಿದೆ. ಈಗ ದೇಶದಲ್ಲಿ 3ನೇ ಹಂತದ ವ್ಯಾಕ್ಸಿನೇಷನ್ ಡ್ರೈವ್ ನಡೆಯುತ್ತಿದ್ದು, 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲಾಗ್ತಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss