ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, June 25, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕಾರ್ಮಿಕ ದಿನಾಚರಣೆ ಅಂಗವಾಗಿ ರೈಲ್ವೆ ಕೂಲಿಕಾರ್ಮಿಕರಿಗೆ ಸನ್ಮಾನ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………….

ಹೊಸದಿಗಂತ ವರದಿ, ಮೈಸೂರು:

ಮೈಸೂರು ಯುವ ಬಳಗ ವತಿಯಿಂದ ವಿಶ್ವ ಕಾರ್ಮಿಕರ ದಿನಾಚರಣೆ ಅಂಗವಾಗಿ ರೈಲ್ವೆ ನಿಲ್ದಾಣದಲ್ಲಿ
ರೈಲ್ವೆ ಕೂಲಿ ಕಾರ್ಮಿಕರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ರೈಲ್ವೆ ಕೂಲಿ ಕಾರ್ಮಿಕರಾದ ಸಾಹೇಬ್ ಅಬ್ದುಲ್, ಪೀರ್ ಪಾಷಾ, ನಾಗರಾಜು, ಲಕ್ಷ್ಮಿ, ಗಂಗನ ಅವರನ್ನು ಸನ್ಮಾನಿಸಿ ಮಾತನಾಡಿದ ರೈಲ್ವೆ ಕೋ ಆಪರೇಟಿವ್ ಸಂಘದ ಅಧ್ಯಕ್ಷರ ಯತಿರಾಜ್, ಕಾರ್ಮಿಕ ದಿನಾಚರಣೆ ಹಿನ್ನೆಲೆ ಮತ್ತು ಪ್ರಾಮುಖ್ಯವನ್ನು ಪ್ರತಿಯೊಬ್ಬ ಕಾರ್ಮಿಕರೂ ಅರಿಯಬೇಕು.
ಕಟ್ಟಡ ಕಾರ್ಮಿಕರು, ಪೌರಕಾರ್ಮಿಕರು, ಅಂಗನವಾಡಿ, ಬಿಸಿಯೂಟ ನೌಕರರು ಸೇರಿದಂತೆ ಎಲ್ಲ ಕ್ಷೇತ್ರಗಳ ಕಾರ್ಮಿಕರು ತಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಪಡೆಯಲು ಒಗ್ಗಟ್ಟಾಗಿ ಮುಂದುವರಿಯಬೇಕು ಎಂಬ ಆಶಯವನ್ನು ವ್ಯಕ್ತಪಡಿಸಿದರು.ಕಾರ್ಮಿಕರಿಲ್ಲದೆ ಜಗತ್ತು ಇರಲು ಸಾಧ್ಯವೇ ಇಲ್ಲ. ಸಮಾಜಕ್ಕೆ ಅನುಕೂಲ ಮಾಡುವ ಕಾರ್ಮಿಕರ ಬಗ್ಗೆ ಕಾಳಜಿಯಿಂದ ಯೋಚಿಸುವರು ಕಡಿಮೆ ಎಂದು ವಿಷಾದಿಸಿದರು.
ಕಾರ್ಮಿಕರು ಸಂಘಟಿತ ಹಾಗೂ ಅಸಂಘಟಿತ ವಲಯಗಳಲ್ಲಿ ದುಡಿಯುತ್ತಿದ್ದು, ಅವರ ಕುಟುಂಬಗಳ ಆರ್ಥಿಕ ಪರಿಸ್ಥಿತಿ ಸದೃಢಗೊಳ್ಳಬೇಕಿದೆ ಎಂದು ತಿಳಿಸಿದರು.
ಈ ವೇಳೆ ರೈಲ್ವೆ ಕೋ ಆಪರೇಟಿವ್ ಸಂಘದ ಉಪಾಧ್ಯಕ್ಷ ರಾಮನಾಥ್, ನಿರ್ದೇಶಕರಾದ ಶಿವಶಂಕರ್, ಚಂದ್ರಶೇಖರ್, ಟಿಟಿ ರುಕ್ಮಣಿ, ಚೇತನ್, ಗೋಪಿ, ಮೈಸೂರು ಯುವ ಬಳಗದ ನವೀನ್, ಪ್ರಮೋದ್ ಗೌಡ, ರವಿ, ಚೇತನ್ ಕಾಂತರಾಜು ಹಾಗೂ ಇನ್ನಿತರರು ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss