ಹೊಸದಿಗಂತ ಡಿಜಿಟಲ್ ಡೆಸ್ಕ್:
ತಿರುಪತಿ ಲಡ್ಡುವಿನಲ್ಲಿ ಪ್ರಾಣಿಯ ಕೊಬ್ಬು ಬಳಕೆಯ ನಂತರ ಕೆಲ ಭಕ್ತರಿಗೆ ಅಲ್ಲಿನ ಪ್ರಸಾದದ ಬಗ್ಗೆಯೂ ನಂಬಿಕೆಯೇ ಇಲ್ಲದಂತಾಗಿದೆ. ಕಳಪೆ ಮಟ್ಟದ ಆಹಾರದ ಬಗ್ಗೆ ಆಗಾಗ ದೂರುಗಳು ಬರುತ್ತಲೇ ಇದ್ದು, ಇದೀಗ ಊಟದಲ್ಲಿ ಹುಳ ಪತ್ತೆಯಾಗಿದೆ ಎಂದು ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನು ವಾರಂಗಲ್ನಿಂದ ತಿಮ್ಮಪ್ಪನ ದರ್ಶನಕ್ಕೆಂದು ತೆರಳಿದ್ದೆ, ಮೊಸರನ್ನ ಊಟ ಮಾಡುವ ಸಮಯದಲ್ಲಿ ಊಟದಲ್ಲಿ ಹುಳು ಸಿಕ್ಕಿತ್ತು. ಈ ವಿಚಾರವನ್ನು ಸಿಬ್ಬಂದಿಗೆ ತಿಳಿಸಿದೆ ಆದರೆ ಅವರ ಪ್ರತಿಕ್ರಿಯೆ ಆಘಾತಕಾರಿಯಾಗಿತ್ತು,ಇದು ಕೆಲವೊಮ್ಮೆ ಸಂಭವಿಸುತ್ತದೆ. ಸರ್ಕಾರ ಬದಲಾದರೂ ಈ ಸಮಸ್ಯೆಗಳು ಹಾಗೆಯೇ ಉಳಿದಿವೆ ಎಂದು ಉತ್ತರ ಕೊಟ್ಟಿದ್ದರು.
ವಿಷಯ ತಿಳಿದ ನಂತರ ದೇವಾಲಯದ ಸಿಬ್ಬಂದಿ ತಮ್ಮನ್ನು ನಿಂದಿಸಲು ಮತ್ತು ಬೆದರಿಸಲು ಪ್ರಯತ್ನಿಸಿದರು ಎಂದು ಭಕ್ತ ಆರೋಪಿಸಿದ್ದಾರೆ. ಸರ್ಕಾರವು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ನಾವು ಊಟ ಮಾಡುವಾಗ ಮಧ್ಯಾಹ್ನ 1.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದಿದ್ದಾರೆ.