ಮಹಿಳೆಯರೇ.. ಫ್ರೀ ಬಸ್ ರೈಡ್ ಬೇಕಾ? ಮಾ.8ರಂದು ಬಿಎಂಟಿಸಿಯಲ್ಲಿ ಉಚಿತ ಪ್ರಯಾಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೇಡೀಸ್ ಫ್ರೀ ಬಸ್ ರೈಡ್ ಬೇಕಾ? ಅಂತಾರಾಷ್ಟ್ರೀಯ ಮಹಿಳಾ ದಿನದಂದು ಬಿಎಂಟಿಸಿಯಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು.

ಹೌದು,ಬೆಂಗಳೂರು ಮಹಾನಗರ ಸಾರಿಗೆ ಮಹಿಳೆಯರಿಗೆ ಗುಡ್‌ನ್ಯೂಸ್ ನೀಡಿದ್ದು, ಇಂದು ಮಧ್ಯರಾತ್ರಿ 12 ರಿಂದ ನಾಳೆ ಮಧ್ಯರಾತ್ರಿ 12 ರವರೆಗೆ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸಲಾಗಿದೆ. ಎಸಿ, ವೋಲ್ವೋ ಸೇರಿದಂತೆ ಬಿಎಂಟಿಸಿಯ ಎಲ್ಲ ಮಾದರಿಯ ಬಸ್‌ನಲ್ಲಿ ಉಚಿತ ಪ್ರಯಾಣ ಮಾಡಬಹುದಾಗಿದೆ.

ಮಹಿಳಾ ದಿನಾಚರಣೆಯ ಅಂಗವಾಗಿ ಒಂದು ದಿನ ಉಚಿತ ಸಂಚಾರಕ್ಕೆ ಅನುಮತಿ ನೀಡಿ ಎಂದು ಸರ್ಕಾರಕ್ಕೆ ಬಿಎಂಟಿಸಿ ಮನವಿ ಮಾಡಿತ್ತು. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಪ್ಪಿಗೆ ಸೂಚಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!