ಶರ್ಟು-ಪ್ಯಾಂಟು ಹಾಕಿ ಕಳ್ಳತನ ಮಾಡಿದ ಲೇಡೀಸ್‌, ಬೀಗ ಹಾಕಿದ ಮನೆಗಳೇ ಟಾರ್ಗೆಟ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸರಣಿ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೊಮ್ಮನಹಳ್ಳಿ ಪೊಲೀಸರು ಆಟೋರಿಕ್ಷಾ ಚಾಲಕಿ ಸೇರಿದಂತೆ ಇಬ್ಬರು ಮಹಿಳೆಯರನ್ನು ಬಂಧಿಸಿದ್ದಾರೆ.

ಬೀಗ ಹಾಕಿದ ಮನೆಗಳನ್ನು ಗುರುತಿಸಿ ಚಿನ್ನಾಭರಣ ಕಳವು ಮಾಡುತ್ತಿದ್ದ ಆಟೋರಿಕ್ಷಾ ಚಾಲಕಿ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಡಿ.ಜೆ.ಹಳ್ಳಿಯ ಶಬರೀನ್‌ ತಾಜ್‌ (38), ನೀಲಂ (22) ಬಂಧಿತರು.

ಇಬ್ಬರೂ ಆರೋಪಿಗಳು ಕಳೆದ ಎರಡು ವರ್ಷಗಳಿಂದ ಸಕ್ರಿಯರಾಗಿದ್ದರು. ಆಟೋ ಚಾಲಕಿ ಬೀಗ ಹಾಕಿದ ಮನೆಗಳನ್ನು ಹುಡುಕುತ್ತಾ ಓಡಾಡುತ್ತಿದ್ದಳು. ಮನೆಯನ್ನು ಆಯ್ಕೆ ಮಾಡಿದ ನಂತರ, ಅವಳು ತನ್ನ ಪಾರ್ಟನರ್ ಜೊತೆ ಸೇರಿ ಕಳ್ಳತನ ಮಾಡುತ್ತಿದ್ದಳು. ಇಬ್ಬರಿಂದ 11 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಬೊಮ್ಮನಹಳ್ಳಿ ಮತ್ತು ಮೈಕೊ ಲೇಔಟ್ ಪೊಲೀಸ್ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ್ದಾರೆ. ಅವರು ಕದ್ದ ಚಿನ್ನಾಭರಣಗಳನ್ನು ಡಿಜೆ ಹಳ್ಳಿ ಮತ್ತು ಟ್ಯಾನರಿ ರಸ್ತೆಯಲ್ಲಿರುವ ಆಭರಣ ಅಂಗಡಿಗಳಿಗೆ ಮಾರಾಟ ಮಾಡುತ್ತಿದ್ದರು, ಆರೋಪಿಗಳಿಂದ ಸುಮಾರು 130 ಗ್ರಾಂ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಬ್ಬರೂ ಮಹಿಳೆಯರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಅಪರಾಧಕ್ಕೆ ಬಳಸಲಾಗಿದ್ದ ಕಾರನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!