ಹೊಸದಿಗಂತ ವರದಿ, ಕಲಬುರಗಿ:
ತನ್ನ ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ, ತಾಯಿ ಕೂಡ ಬೆಂಕಿ ಹಚ್ಚಿಕೊಂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಪಂಚಶೀಲ ನಗರದಲ್ಲಿ ನಡೆದಿದೆ.
ಮೃತರನ್ನು ತಾಯಿ ದೀಕ್ಷಾ (26), ಮಗಳು ಸಿಂಚನಾ (2) ಇಬ್ಬರು ಮೃತಪಟ್ಟಿದ್ದು, ಮಗ ಧನಂಜಯ (3) ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾನೆ ಎಂದು ತಿಳಿದು ಬಂದಿದೆ.
ಗಂಡ ಮತ್ತು ಆತ್ತೆ ಮಾವನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ಸ್ಟೇಷನ್ ಬಜಾರ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.