VIRAL VIDEO| ಪುಣ್ಯಕ್ಷೇತ್ರದ ಬಳಿ ಲವ್ ಪ್ರಪೋಸಲ್:‌ ನೆಟ್ಟಿಗರ ಆಕ್ರೋಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸೋಷಿಯಲ್ ಮೀಡಿಯಾದಲ್ಲಿ ಚಿತ್ರ ವಿಚಿತ್ರ ವಿಡಿಯೋಗಳು ವೈರಲ್‌ ಆಗುತ್ತವೆ. ಇದೀಗ ಅಂತಹದೊಂದು ವಿಡಿಯೋ ಕೇದಾರನಾಥ ಧಾಮದಿಂದ ಹೊರಬಿದ್ದಿದೆ. ಈ ವಿಡಿಯೋದಲ್ಲಿ ಕೇದಾರನಾಥ ಧಾಮದ ಮುಂದೆ ಹುಡುಗಿಯೊಬ್ಬಳು ತನ್ನ ಗೆಳೆಯನಿಗೆ ಪ್ರಪೋಸ್ ಮಾಡಿದ್ದಾಳೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕೇದಾರನಾಥ ಧಾಮದಿಂದ ಇಂತಹ ವೀಡಿಯೋಗಳು ಬರಲಾರಂಭಿಸಿದ್ದರಿಂದ ಈಗಲೇ ಇಲ್ಲಿ ಮೊಬೈಲ್ ಬ್ಯಾನ್ ಮಾಡಬೇಕು ಎಂದು ಕೆಲವರು ಸಲಹೆ ನೀಡಿದ್ದಾರೆ.

ಓವರ್ ಆಕ್ಷನ್ ಎಂದ ನೆಟ್ಟಿಗರು
ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಬಗ್ಗೆ ಜನ ವಿಭಿನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಧಾರ್ಮಿಕ ಸ್ಥಳಗಳಲ್ಲಿ ಇಂತಹ ಕ್ರಮಗಳು ಸೂಕ್ತವಲ್ಲ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಇಂತಹ ಸ್ಥಳಗಳಲ್ಲಿ ಮೊಬೈಲ್ ನಿಷೇಧಿಸಬೇಕು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!