Wednesday, February 8, 2023

Latest Posts

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: ಆರೋಪಿ ಆಶಿಶ್ ಮಿಶ್ರಾಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಲಖಿಂಪುರ ಖೇರಿ ಹಿಂಸಾಚಾರದ ಆರೋಪಿ ಆಶಿಶ್ ಮಿಶ್ರಾಗೆ ಸುಪ್ರೀಂ ಕೋರ್ಟ್ ಇಂದು ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ಮಿಶ್ರಾ ದೆಹಲಿ ಮತ್ತು ಉತ್ತರ ಪ್ರದೇಶದ ರಾಷ್ಟ್ರೀಯ ರಾಜಧಾನಿ ಪ್ರದೇಶ (ಎನ್‌ಸಿಟಿ) ಯಲ್ಲಿ ಉಳಿಯಬಾರದು ಮತ್ತು ಜಾಮೀನಿನ ಮೇಲೆ ಬಿಡುಗಡೆಯಾದ ಒಂದು ವಾರದ ನಂತರ ಉತ್ತರ ಪ್ರದೇಶವನ್ನು ತೊರೆಯುವ ಷರತ್ತಿನ ಮೇಲೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಮಿಶ್ರಾ ಅವರ ಜಾಮೀನು ಅರ್ಜಿಯನ್ನು ಉತ್ತರ ಪ್ರದೇಶ ಸರ್ಕಾರ ಕಳೆದ ವಾರ ವಿರೋಧಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ತಮಗೆ ಜಾಮೀನು ನಿರಾಕರಿಸಿದ್ದನ್ನು ಪ್ರಶ್ನಿಸಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಮಿಶ್ರಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಮಿಶ್ರಾ ಅಕ್ಟೋಬರ್ 3, 2021 ರಂದು ಲಖಿಂಪುರ ಖೇರಿಯಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರನ್ನು ಕೊಂದ ಘಟನೆಗೆ ಸಂಬಂಧಿಸಿದಂತೆ ಕೊಲೆ ಪ್ರಕರಣವನ್ನು ಎದುರಿಸುತ್ತಿದ್ದಾರೆ. ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಮಿಶ್ರಾ ಹರಿಹಾಯ್ದಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಆಶಿಶ್‌ ಮಿಶ್ರಾ ಮತ್ತು ಉಳಿದ ಆರೋಪಿಗಳ ವಿರುದ್ಧ 302 (ಕೊಲೆ), 120 ಬಿ (ಕ್ರಿಮಿನಲ್‌ ಪಿತೂರಿ) ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳಡಿ ಆರೋಪ ಹೊರಿಸಲಾಗಿದೆ. ಅವರನ್ನು ಅಕ್ಟೋಬರ್ 9 ರಂದು ಬಂಧಿಸಲಾಯಿತು ಮತ್ತು ಫೆಬ್ರವರಿ 2022 ರಲ್ಲಿ ಜಾಮೀನು ನೀಡಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!