Friday, July 1, 2022

Latest Posts

ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣ: 3 ದಿನ ಪೊಲೀಸ್ ವಶಕ್ಕೆ ಆಶಿಶ್ ಮಿಶ್ರಾ!

ಹೊಸದಿಗಂತ ಆನ್ ಲೈನ್ ಡೆಸ್ಕ್

ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಆಶಿಶ್ ಮಿಶ್ರಾ ಅವರನ್ನು 3 ದಿನ ಪೊಲೀಸ್ ವಶಕ್ಕೆ ನೀಡಿ ಉತ್ತರ ಪ್ರದೇಶದ ನ್ಯಾಯಾಲಯ ಆದೇಶಿಸಿದೆ.
ಆಶಿಶ್ ಮಿಶ್ರಾರನ್ನು ವಶಕ್ಕೆ ನೀಡುವಂತೆ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆಶಿಶ್ ಮಿಶ್ರಾ ಅವರನ್ನು ಶನಿವಾರ ಬಂಧಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು.
ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೊಲೆ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ ಹಲವು ಅಪರಾಧಗಳ ವಿರುದ್ಧ ಆತನ ಮೇಲೆ ಆರೋಪ ಹೊರಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss