ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಲಖೀಂಪುರ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶೀಶ್ ಮಿಶ್ರಾ ಕ್ರೈಂ ಬ್ರಾಂಚ್ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಇಂದು ಬೆಳಗ್ಗೆ ಉತ್ತರ ಪ್ರದೇಶ ಪೊಲೀಸರು ಆಶೀಶ್ ಮಿಶ್ರಾಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದರು. ಸಮನ್ಸ್ ನಂತೆಯೇ ಆಶಿಷ್ ಉತ್ತರ ಪ್ರದೇಶ ಪೊಲೀಸರ ಅಪರಾಧ ವಿಭಾಗದ ಅಧಿಕಾರಿಗಳ ಮುಂದೆ ಹಾಜರಾಗಿದ್ದರು.
ಈ ಹಿಂದೆ ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿತ್ತು. ಅನಾರೋಗ್ಯದ ಕಾರಣ ವಿಚಾರಣೆಗೆ ಗೈರು ಆಗುವುದಾಗಿ ಪ್ರತಿಕ್ರಿಯಿಸಿದ್ದರು. ಅದಾದ ನಂತರ ಶುಕ್ರವಾರ ಎರಡನೇ ಸಮನ್ಸ್ ನೀಡಿದ್ದರು
ಆಶೀಶ್ ಮಿಶ್ರಾ ಶನಿವಾರ ವಿಚಾರಣೆಗೆ ಹಾಜರಾಗುವ ಮುನ್ನ ಪೊಲೀಸರು ತೆನಿ ನಿವಾಸ ಮತ್ತು ಲಖಿಂಪುರ್ ಖೇರಿಯಲ್ಲಿ ಸಾಕಷ್ಟು ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದರು.