ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ಚುನಾವಣಾ ಅಕ್ರಮಕ್ಕೆ ಕಡಿವಾಣ ಹಾಕಲು ರಾಜ್ಯದಲ್ಲಿಯೂ ಖಾಕಿ ಪಡೆ ಕಣ್ಗಾವಲು ಹೆಚ್ಚಿಸಿದ್ದು, ಬೆಂಗಳೂರಿನ ಅಶೋಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯಾವುದೇ ದಾಖಲೆಯಿಲ್ಲದೆ ಸಾಗಾಟವಾಗುತ್ತಿದ್ದ ಬರೋಬ್ಬರಿ 13 ಲಕ್ಷ ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಚುನಾವಣಾ ಚೆಕ್ಪೋಸ್ಟ್ನಲ್ಲಿ ಕಳೆದ ರಾತ್ರಿ ತಪಾಸಣೆ ನಿರತರಾಗಿದ್ದ ಪೊಲೀಸರು ಈ ಅಕ್ರಮ ಸಾಗಾಟವನ್ನು ಪತ್ತೆಹಚ್ಚಿದ್ದಾರೆ. ಇನ್ನು ನೆಲಮಂಗಲ ಚೆಕ್ಪೋಸ್ಟ್ನಲ್ಲಿ ಕೂಡಾ ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಏಳು ಲಕ್ಷ ರೂಪಾಯಿ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ರಾಜ್ಯದಾದ್ಯಂತ ಪೊಲೀಸ್ ಇಲಾಖೆ ಅಲರ್ಟ್ ಆಗಿದ್ದು ಅಲ್ಲಲ್ಲಿ ಚುನಾವಣಾ ಚೆಕ್ಪೋಸ್ಟ್ ನಿರ್ಮಿಸಿ ಪ್ರತೀ ಚಲನವಲನಗಳ ಮೇಲೂ ನಿಗಾ ಇರಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ