ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್‍ ಲೋಕಸಭಾ ಸದಸ್ಯತ್ವದಿಂದ ಅನರ್ಹ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್‍ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದೆ.

2009ರ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಪಿಎಂ ಸಯೀದ್ ಅವರ ಅಳಿಯ ಮೊಹಮ್ಮದ್ ಸಾಲಿಹ್ ಅವರನ್ನು ಕೊಲ್ಲಲು ಯತ್ನಿಸಿದ್ದರು.

ಈ ಹಿನ್ನೆಲೆಯಲ್ಲಿ 2009ರಲ್ಲಿ ದಾಖಲಾದ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕವರಟ್ಟಿಯ ಸೆಷನ್ಸ್ ನ್ಯಾಯಾಲಯವು ಇತ್ತೀಚೆಗೆ ತೀರ್ಪನ್ನು ಪ್ರಕಟಿಸಿತ್ತು.

ಈ ತೀರ್ಪಿನ ಅನ್ವಯ ಮೊಹಮ್ಮದ್ ಫೈಜಲ್‍ನನ್ನು ದೋಷಿ ಎಂದು ತಿಳಿಸಿದೆ. ಅವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಇದೀಗ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸುವಂತೆ ಲೋಕಸಭೆ ಸಚಿವಾಲಯ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!