ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಕ್ಷದ್ವೀಪ ಪ್ರವಾಸಕ್ಕೆ ಪ್ರಧಾನಿ ಮೋದಿ ಕರೆಕೊಟ್ಟಿದ್ದು, ಇದೀಗ ಲಕ್ಷದ್ವೀಪ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಮುಂದಾಗಿದೆ.
ಈ ಬಾರಿಯ ಮಧ್ಯಂತರ ಬಜೆಟ್ನಲ್ಲಿ ಮಾಲ್ಡೀವ್ಸ್ ಸುದ್ದಿ ಸದ್ದು ಮಾಡಿದ್ದು, ಲಕ್ಷದ್ವೀಪ ಅತ್ಯಾಕರ್ಷಕ, ಸುಸಜ್ಜಿತ ಪ್ರವಾಸಿ ತಾಣವಾಗಿ ಬದಲಾಗಲಿದೆ.
ದೇಶದ ಪ್ರವಾಸಿತಾಣಗಳಿಗೆ ಒತ್ತು ನೀಡುವ ಬಗ್ಗೆ ನಿರ್ಮಲಾ ಸೀತಾರಾಮನ್ ಹೇಳಿದ್ದು, ಲಕ್ಷದ್ವೀಪ ಪ್ರವಾಸಕ್ಕೆ ಹೆಚ್ಚಿನ ಒಲವು ತೋರಲಾಗಿದೆ.
ಬಂದರು ಸಂಪರ್ಕ, ಪ್ರವಾಸೋದ್ಯಮ ಅಭಿವೃದ್ಧಿಗೆ ಬೇಕಾದ ಮೂಲ ಸೌಕರ್ಯಗಳನ್ನು ಸರ್ಕಾರ ಕಲ್ಪಿಸುತ್ತದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.