Thursday, June 1, 2023

Latest Posts

ನಾಳೆ ವಿಧಾನಪರಿಷತ್‌ ಸ್ಥಾನಕ್ಕೆ ಲಕ್ಷ್ಮಣ ಸವದಿ ರಾಜೀನಾಮೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಅಥಣಿ ಕ್ಷೇತ್ರದ ಟಿಕೆಟ್‌ ನಿರೀಕ್ಷೆಯಲ್ಲಿದ್ದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಈಗ ಬೇಸರಗೊಂಡಿದ್ದಾರೆ. ಅಥಣಿ ಟಿಕೆಟ್‌ ಕೈತಪ್ಪಿದ್ದರಿಂದ ಬಿಜೆಪಿ ಬಿಡುವ ಬಗ್ಗೆ ಚಿಂತನೆ ನಡೆಸಿದ ಅವರು, ಇದೀಗ ತಮ್ಮ ನಿರ್ಧಾರವನ್ನು ಘೋಷಿಸಿದ್ದಾರೆ. ನಾಳೆ ಅವರು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.

ಅಥಣಿಯಲ್ಲಿ ಮಾತನಾಡಿರುವ ಲಕ್ಷ್ಮಣ ಸವದಿ, ನಾಳೆ ನಾನು ಸಭಾಪತಿಯವರನ್ನು ಭೇಟಿಯಾಗುತ್ತಿದ್ದೇನೆ. ನನ್ನ ವಿಧಾನಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.

ಪಕ್ಷಾಂತರದ ಬಗ್ಗೆ ಮಾತನಾಡಿರುವ ಅವರು, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಎರಡೂ ಕಡೆಯಿಂದ ಆಹ್ವಾನವಿದೆ. ಆದ್ರೆ ನಾನು ಮೊದಲು ಕಾರ್ಯಕರ್ತರ ಜೊತೆ ಮಾತನಾಡುತ್ತೇನೆ. ಕಾರ್ಯಕರ್ತರ ಅಭಿಪ್ರಾಯ ಪಡೆದು ನಂತರ ಯಾವ ಪಕ್ಷಕ್ಕೆ ಹೋಗಬೇಕು ಎಂದು ತೀರ್ಮಾನಿಸುತ್ತೇನೆ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!