ಲಾಲ್ ಬಾಗ್ ಫಲಪುಷ್ಪ ಪ್ರದರ್ಶನ: ರೂ. 1.79 ಕೋಟಿಗೂ ಹೆಚ್ಚು ಹಣ ಸಂಗ್ರಹ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಆಯೋಜಿಸಲಾದ ಲಾಲ್‌ ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಮಂಗಳವಾರ ಅದ್ಧೂರಿ ತೆರೆಬಿದ್ದಿದ್ದು, ಕೊನೆಯ ದಿನವಾದ ಇಂದು ಪ್ರದರ್ಶನ ವೀಕ್ಷಿಸಲು ಸಸ್ಯಕಾಶಿಗೆ ಜನಸಾಗರವೇ ಹರಿದುಬಂದಿತ್ತು.

ಆಗಸ್ಟ್ 4ರಿಂದ 15ರವರೆಗೆ ಒಟ್ಟಾರೆ 5 ಲಕ್ಷಕ್ಕೂ ಅಧಿಕ ಮಂದಿ ಆಗಮಿಸಿದ್ದು, 1.79 ಕೋಟಿ ರೂ.ಗೂ ಅಧಿಕ ಹಣ ಸಂಗ್ರಹವಾಗಿದೆ.

ಜನಜಂಗುಳಿ ನೆರೆದಿತ್ತು
ಸ್ವಾತಂತ್ರ್ಯೋತ್ಸವದ ದಿನವಾದ ಇಂದು ಜನಜಂಗುಳಿ ನೆರೆದಿತ್ತು. ರಜಾ ದಿನಗಳಲ್ಲಿ ಹೆಚ್ಚು ವೀಕ್ಷಕರು ಆಗಮಿಸಿದ್ದಾರೆ. ಪ್ರವೇಶ ಶುಲ್ಕ 80 ರೂ ಇದ್ದುದರಿಂದ ಈ ಬಾರಿ ಹೆಚ್ಚು ಹಣ ಸಂಗ್ರಹವಾಗಿದೆ. ವಿವಿಧ ಹೂಗಳಿಂದ ರಚಿಸಿದ ವಿಧಾನಸೌಧದ 18 ಅಡಿ ಎತ್ತರದ ಪ್ರತಿಕೃತಿ, 14 ಅಡಿಯ ಕೆಂಗಲ್ ಹನುಮಂತಯ್ಯನವರ ವಿಗ್ರಹ ಫಲಪುಷ್ಪ ಪ್ರದರ್ಶನದ ವಿಶೇಷತೆಯಾಗಿತ್ತು.

ಮುಂಜಾನೆ ಬೆಳಗ್ಗೆ 7 ಗಂಟೆಯಿಂದಲೇ ಪ್ರದರ್ಶನ ತೆರೆಯಲಾಗಿತ್ತು. ವಾಹನ ಮತ್ತು ಜನ ಸಂಚಾರದಿಂದ ಲಾಲ್‌ಬಾಗ್ ಸುತ್ತಮುತ್ತಲಿನ ರಸ್ತೆಗಳಾದ ಸಿದ್ದಾಪುರ, ಅಶೋಕ ಪಿಲ್ಲರ್, ಆರ್.ವಿ. ರಸ್ತೆ, ಹೊಸೂರು ರಸ್ತೆ, ಸೌತ್‌ ಎಂಡ್ ಸೇರಿದಂತೆ ನಾನಾ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಪೊಲೀಸರು ಹರಸಾಹಸಪಟ್ಟು ಸಂಚಾರ ದಟ್ಟನೆ ನಿರ್ವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!