ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ: ಟ್ವೀಟ್‌ ಮೂಲಕ ಗೌರವ ಸೂಚಿಸಿದ ಪ್ರಧಾನಿ 

 ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅಕ್ಟೋಬರ್‌ 2, ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜೊತೆಗೆ ದೇಶದ ಎರಡನೇ ಪ್ರಧಾನಿ ಲಾಲ್‌ ಬಹುದ್ದೂರ್‌ ಶಾಸ್ತ್ರಿಯವರ ಜನ್ಮದಿನ. ಮಹಾತ್ಮರ ಭಾಷಣದಿಂದ ಪ್ರೇರಿತರಾಗಿ ತಮ್ಮ ವಿದ್ಯಾಭ್ಯಾಸವನ್ನು ಕೊನೆಗೊಳಿಸಿ 17ನೇ ವಯಸ್ಸಿಗೆ ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕಿದ ಧೀಮಂತ ಯುವಕ ಲಾಲ್‌ ಬಹುದ್ದೂರ್‌ ಶಾಸ್ತ್ರಿ.

ಇಂದು ಅವರ ಜನ್ಮದಿನ. ದೇಶದ ಜನ ಸ್ಮರಿಸಬೇಕಾದ ಸ್ಪೂರ್ತಿದಾಯಕ ವ್ಯಕ್ತಿತ್ವ. ಇಂದು ಅವರ ಜನ್ದಿನ ಹಿನ್ನೆಲೆ ಪ್ರಧಾನಿ ಮೋದಿ ಟ್ವೀಟ್‌ ಮೂಲಕ ಭಾರತಕ್ಕೆ ಅವರು ಮಾಡಿದ ಸೇವೆಯನ್ನು ಯುವಜನತೆಯ ಮುಂದಿಟ್ಟಿದ್ದಾರೆ.

ʻಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯಂದು ಅವರನ್ನು ಸ್ಮರಿಸುತ್ತಿದ್ದೇವೆ. ಅವರ ಸರಳತೆ, ದೇಶಕ್ಕಾಗಿ ಸಮರ್ಪಣೆ ಮತ್ತು ‘ಜೈ ಜವಾನ್, ಜೈ ಕಿಸಾನ್’ ಎಂಬ ಸಾಂಪ್ರದಾಯಿಕ ಕರೆ ಇಂದಿಗೂ ಪ್ರತಿಧ್ವನಿಸುತ್ತದೆ, ಜೊತೆಗೆ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ. ಭಾರತದ ಪ್ರಗತಿಗೆ ಅವರ ಅಚಲ ಬದ್ಧತೆ ಮತ್ತು ಸವಾಲಿನ ಸಮಯದಲ್ಲಿ ಅವರ ನಾಯಕತ್ವವು ಅನುಕರಣೀಯವಾಗಿದೆ. ಬಲಿಷ್ಠ ಭಾರತಕ್ಕಾಗಿ ಅವರ ದೃಷ್ಟಿಕೋನವನ್ನು ಸಾಕಾರಗೊಳಿಸಲು ನಾವು ಯಾವಾಗಲೂ ಕೆಲಸ ಮಾಡೋಣʼ. ಎಂದು ಭಾಋತೀಯರಲ್ಲಿ ಪ್ರಧಾನಿ ಮನವಿ ಮಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!