ಹೊಸದಿಗಂತ ಡಿಜಿಟಲ್ ಡೆಸ್ಕ್:
ಟನಲ್ ರಸ್ತೆಯಿಂದ ಲಾಲ್ ಬಾಗ್ ವಿರೂಪಗೊಳ್ಳಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಈ ಬಗ್ಗೆ ಮಾತನಾಡಿದ್ದಾರೆ. ಟನಲ್‌ನಿಂದ ಲಾಲ್‌ಬಾಗ್ ವಿರೂಪಗೊಳ್ಳೋದಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನ ಪ್ರಗತಿಗೆ ಟನಲ್ ರಸ್ತೆ ಮಾಡಲಾಗುತ್ತಿದೆ. ನಾವು ಯಾವುದೇ ರೀತಿಯಲ್ಲೂ ಲಾಲ್ ಬಾಗ್ ಅನ್ನು ವಿರೂಪಗೊಳಿಸಲು ಹೋಗುವುದಿಲ್ಲ. ಲಾಲ್ ಬಾಗ್ ಗೆ ಐತಿಹಾಸಿಕ ಮಹತ್ವವಿದೆ, ಅದು ಎಷ್ಟು ಪವಿತ್ರವಾದುದು ಎಂಬುದು ನಮಗೆ ತಿಳಿದಿದೆ.
ಮುಂದಿನ ಸೋಮವಾರ ಲಾಲ್ ಬಾಗ್ ಅನ್ನು ಅಧಿಕಾರಿಗಳ ಜೊತೆ ವೀಕ್ಷಣೆ ಮಾಡುತ್ತೇನೆ. ಈ ಕುರಿತು ಯಾರಿಗೂ ಆತಂಕ ಬೇಡ ಎಂದರು.
ಟನಲ್‌ನಿಂದ ಲಾಲ್ ಬಾಗ್ ವಿರೂಪಗೊಳ್ಳುವುದಿಲ್ಲ: ಡಿ.ಕೆ.ಶಿವಕುಮಾರ್
