ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೇವು ಹಗರಣದ ಪ್ರಕರಣದಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ರಾಷ್ಟ್ರೀಯ ಜನತಾದಳ ನಾಯಕ ಲಾಲು ಪ್ರಸಾದ್ ಯಾದವ್ ಅವರನ್ನು ದೋಷಿ ಎಂದು ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಮೇವು ಹಗರಣದ ಪ್ರಕರಣದ ಐದನೇ ಕೇಸ್ ಇದಾಗಿದೆ. ಕಳೆದ ವರ್ಷ ಏಪ್ರಿಲ್‌ನಲ್ಲಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಒಂದಾದ ದುಮ್ಕಾ ಖಜಾನೆ ಪ್ರಕರಣದಲ್ಲಿ ಜಾರ್ಖಂಡ್ ಹೈಕೋರ್ಟ್ ಲಾಲುಗೆ ಜಾಮೀನು ನೀಡಿತ್ತು.
ಅ.2020ಯಲ್ಲಿ ಚೈಬಾಸಾ ಖಜಾನೆ ಹಗರಣ ಪ್ರಕರಣದಲ್ಲಿ ಮತ್ತು ಫೆ.2020 ರಲ್ಲಿ ದಿಯೋಘರ್ ಖಜಾನೆ ಹಗರಣ ಪ್ರಕರಣದಲ್ಲಿ ಜಾಮೀನು ಪಡೆದಿದ್ದರು. ಈಗ ಐದನೇ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಲಾಗಿದ್ದು, ಫೆ.21ಕ್ಕೆ ಶಿಕ್ಷೆ ಪ್ರಕಟವಾಗಲಿದೆ.