ಸತತ 12 ನೇ ಬಾರಿಗೆ ಆರ್‌ಜೆಡಿ ಅಧ್ಯಕ್ಷರಾಗಿ ಆಯ್ಕೆಯಾದ ಲಾಲೂ ಪ್ರಸಾದ್‌ ಯಾದವ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಸಂಸ್ಥಾಪಕ ಲಾಲು ಪ್ರಸಾದ್ ಯಾದವ್ ಅವರು ಭಾನುವಾರ ದಾಖಲೆಯ 12 ನೇ ಬಾರಿಗೆ ಪಕ್ಷದ ಅಧ್ಯಕ್ಷರಾಗಿ ಅವಿರೋಧವಾಗಿ ಮರು ಆಯ್ಕೆಯಾಗಿದ್ದಾರೆ.

ಯಾದವ್ ಮಾತ್ರ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನಾಮನಿರ್ದೇಶನವನ್ನು ನೋಂದಾಯಿಸಿದ್ದರು ಹೀಗಾಗಿ ಪಕ್ಷದ ಮುಖ್ಯಸ್ಥರಾಗಿ ಅವಿರೋಧವಾಗಿ ಆಯ್ಕೆಯಾದರು.

ನವದೆಹಲಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ಸಮಾವೇಶದಲ್ಲಿ ಔಪಚಾರಿಕ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 10 ರಂದು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ತಮ್ಮ ಮೂತ್ರಪಿಂಡ ಕಸಿಗಾಗಿ ಸಿಂಗಾಪುರಕ್ಕೆ ತೆರಳುವ ಮುನ್ನ ಸಭೆ ನಡೆಯುತ್ತಿದೆ.

ಸೆಪ್ಟೆಂಬರ್ 28 ರಂದು ರಾಷ್ಟ್ರ ರಾಜಧಾನಿಯಲ್ಲಿರುವ ಪಕ್ಷದ ಕಚೇರಿಯಲ್ಲಿ ಲಾಲು ನಾಮಪತ್ರ ಸಲ್ಲಿಸಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!