ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ಪುತ್ರ ತೇಜಸ್ವಿ ಯಾದವ್ ಹೇಳಿದ್ದಾರೆ.
ಕಿಡ್ನಿ ವೈಫಲ್ಯ ಸಮಸ್ಯೆಯಿಂದ ಬಳಲುತ್ತಿದ್ದ ಲಾಲು ಪ್ರಸಾದ್ ಯಾದವ್ರನ್ನು ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲಾಲು ಅವರ ಪುತ್ರಿ ರೋಹಿಣಿ ಆಚಾರ್ಯ ಕಿಡ್ನಿ ನೀಡಿದ್ದು, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ತೇಜಸ್ವಿ ಹೇಳಿದ್ದಾರೆ.
Ready to rock and roll ✌️
Wish me a good luck 🤞 pic.twitter.com/R5AOmFMW0E— Rohini Acharya (@RohiniAcharya2) December 5, 2022
ರೋಹಿಣಿ ಆಚಾರ್ಯ ಈ ಬಗ್ಗೆ ಟ್ವೀಟ್ ಮಾಡಿದ್ದು, ಎಲ್ಲರೂ ತಂದೆಗಾಗಿ ಪ್ರಾರ್ಥಿಸಿ ಎಂದು ಕೇಳಿಕೊಂಡಿದ್ದರು.