ಹೊಸದಿಗಂತ ಡಿಜಿಟಲ್ ಡೆಸ್ಕ್:
ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಆರೋಗ್ಯ ಮತ್ತೆ ಹದಗೆಟ್ಟಿದೆ. ಅವರನ್ನು ದೆಹಲಿಯ ಏಮ್ಸ್‌ಗೆ ದಾಖಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರ ಆರೋಗ್ಯದ ಸ್ಥಿತಿ ಸ್ಥಿರವಾಗಿದ್ದು, ವೈದ್ಯರು ತೀವ್ರ ನಿಗಾ ವಹಿಸಿದ್ದಾರೆ.
ಲಾಲು ಪ್ರಸಾದ್ ಯಾದವ್ ಸೋಮವಾರ ಬೆಳಗ್ಗೆ ದೆಹಲಿಗೆ ತೆರಳಿದ್ದರು. ದೆಹಲಿಗೆ ತೆರಳಿದ್ದ ವೇಳೆ ಬಿಹಾರದ ನಿತೀಶ್ ಕುಮಾರ್ ಸರ್ಕಾರವನ್ನು ಟಾರ್ಗೆಟ್ ಮಾಡಿದ್ದರು. ನಿನ್ನೆ ದಿಢೀರ್ ಅನಾರೋಗ್ಯ ಹಿನ್ನೆಲೆಯಲ್ಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.