ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಜನರ ಆತಂಕಕ್ಕೆ ಕಾರಣವಾಗಿರುವ ಲ್ಯಾಂಬ್ಡಾ ರೂಪಾಂತರಿ ಭಾರತದಲ್ಲಿ ಪತ್ತೆಯಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.
ಕೊರೋನಾ ಎರಡನೇ ಅಲೆ ಇನ್ನೂ ಸಂಪೂರ್ಣವಾಗಿ ಮುಗಿದಿಲ್ಲ. ಈಗಲೂ ಎಚ್ಚರ ತಪ್ಪಿದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಎಚ್ಚರಿಸಿದೆ.
ನಿರ್ಬಂಧಗಳನ್ನು ಪಾಲಿಸದೆ ಜನರು ಈಗಾಗಲೇ ಪ್ರವಾಸಗಳಲ್ಲಿ ತೊಡಗಿದ್ದಾರೆ. ಮಾಸ್ಕ್, ಸಾಮಾಜಿಕ ಅಂತರ ಇಲ್ಲದೆ ಎಲ್ಲವೂ ನಾರ್ಮಲ್ ಎನ್ನುವಂತೆ ಬಿಹೇವ್ ಮಾಡುತ್ತಿದ್ದಾರೆ. ಆದರೆ ಇದರಿಂದ ಅಪಾಯ ತಪ್ಪಿದ್ದಲ್ಲ ಎನ್ನಲಾಗಿದೆ. ಲ್ಯಾಂಬ್ಡಾ ರೂಪಾಂತರಿ ಎನ್ನುವುದು ವೇರಿಯಂಟ್ ಆಫ್ ಇಂಟ್ರೆಸ್ಟ್. ಈ ರೂಪಾಂತರಿ ಗಂಭೀರವಾಗಿ ಪರಿಗಣಿಸಬೇಕಾದ್ದು.ಭಾರತದಲ್ಲಿ ಸೋಂಕು ಕಾಣಿಸಿರುವ ಯಾವುದೇ ಪುರಾವೆಗಳಿಲ್ಲ ಎಂದು ನೀತಿ ಆಯೋಗದ ಆರೋಗ್ಯ ವಿಭಾಗದ ಸದಸ್ಯ ವಿ.ಕೆ.ಪಾಲ್ ಮಾಹಿತಿ ನೀಡಿದ್ದಾರೆ.