ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಉದ್ಯಮಿಯೊಬ್ಬರು ಲ್ಯಾಂಬೊರ್ಗಿನಿ ಕಾರ್ನಲ್ಲಿ ಜಾಲಿ ರೈಡ್ ಹೋಗಿದ್ದು, ವಿದ್ಯುತ್ ಕಂಬಕ್ಕೆ ಕಾರು ಗುದ್ದಿದ್ದಾರೆ. ಉದ್ಯಮಿ ಸಿದ್ಧಾರ್ಥ್ ಚಲಾಯಿಸುತ್ತಿದ್ದ ಕಾರು ಜ್ಞಾನಭಾರತಿ ವಿಶ್ವವಿದ್ಯಾಲಯ ಸಮೀಪದನ್ಯಾಷನಲ್ ಕಾಲೇಜ್ ಬಳಿ ಅಪಘಾತಕ್ಕೀಡಾಗಿದೆ.ಕಾರು ನಜ್ಜುಗುಜ್ಜಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿದ್ದು, ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಗ್ಲೋಬಲ್ ಟೆಕ್ ಪಾರ್ಕ್ ಹೆಸರಿನಲ್ಲಿ ಕಾರು ನೋಂದಣಿಯಾಗಿದೆ.