ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಅನಿಲ್ ಕುಂಬ್ಳೆ ಸರ್ಕಲ್ನಲ್ಲಿ ನಡೆದ ಐಷಾರಾಮಿ ಕಾರು ಡ್ರಿಫ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತೀವ್ರ ಕ್ರಮ ಕೈಗೊಂಡಿದ್ದಾರೆ.
ಅಪಾಯಕಾರಿ ರೀತಿಯಲ್ಲಿ ವಾಹನ ಚಾಲನೆ ನಡೆಸಿದ ಆರೋಪದ ಮೇಲೆ ಲ್ಯಾಂಬೊರ್ಗಿನಿ ಕಾರನ್ನು ಕಬ್ಬನ್ ಪಾರ್ಕ್ ಸಂಚಾರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಪ್ರಕರಣದಲ್ಲಿ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಹೆಸರು ಕೇಳಿಬಂದಿದ್ದು, ಅವರೇ ಕಾರು ಚಲಾಯಿಸಿ ಡ್ರಿಫ್ಟಿಂಗ್ ನಡೆಸಿದರೇ ಎಂಬ ಅನುಮಾನ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅವರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ ಎನ್ನಲಾಗಿದೆ. ಜೊತೆಗೆ, ಕಾರಿನ ನೋಂದಣಿ ವಿವರಗಳು ಮತ್ತು ಮಾಲೀಕತ್ವದ ಮಾಹಿತಿ ಪರಿಶೀಲಿಸಲು ಪ್ರಾದೇಶಿಕ ಸಾರಿಗೆ ಕಚೇರಿಗೆ (ಆರ್ಟಿಒ) ಪೊಲೀಸರು ಪತ್ರ ಬರೆದಿದ್ದಾರೆ.
ಇದನ್ನೂ ಓದಿ:
ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಸಂಗ್ರಹಿಸಿದ್ದು, ಅದರಲ್ಲಿ ಕಾರು ಹಲವು ಬಾರಿ ವೃತ್ತಾಕಾರದಲ್ಲಿ ಡ್ರಿಫ್ಟ್ ಮಾಡುತ್ತಿರುವುದು ಕಾಣಿಸಿಕೊಂಡಿದೆ. ಸಾರ್ವಜನಿಕ ರಸ್ತೆಗಳಲ್ಲಿ ಇಂತಹ ಅಪಾಯಕಾರಿ ಚಾಲನೆ ಮಾಡಿದರೆ ಅಪಘಾತ ಸಂಭವಿಸುವ ಸಾಧ್ಯತೆ ಹೆಚ್ಚಿದೆ ಎಂದು ಪೊಲೀಸರು ಎಚ್ಚರಿಸಿದ್ದಾರೆ.
ಈ ಡ್ರಿಫ್ಟಿಂಗ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.



