ಹೊಸದಿಗಂತ ಡಿಜಿಟಲ್ ಡೆಸ್ಕ್:
ಭೂ ಸ್ವಾಧೀನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ಮಹತ್ವದ ನಿರ್ದೇಶನವೊಂದನ್ನ ನೀಡಿದೆ.
ರಸ್ತೆಗಳ ಅಗಲೀಕರಣಕ್ಕಾಗಿ ಸ್ವಾಧೀನಪಡಿಸಿಕೊಂಡಿರುವ ಬೆಂಗಳೂರಿನ ಅರಮನೆ ಮೈದಾನದ 15.7 ಎಕರೆ ಜಾಗಕ್ಕೆ ಒಂದು ವಾರದೊಳಗೆ ₹3,400 ಕೋಟಿ ರೂ ಮೊತ್ತದ ಟಿಡಿಆರ್ ಪ್ರಮಾಣಪತ್ರ ನೀಡುವಂತೆ ನಿರ್ದೇಶಿಸಿದೆ.
ರಾಜ್ಯ ಸರ್ಕಾರದ ವಾದ: ಬೆಂಗಳೂರು ಅರಮನೆ ಮೈದಾನದಲ್ಲಿ ಈವರೆಗೆ ಬಳಸಿಕೊಂಡಿರುವ ಜಾಗಕ್ಕೆ ಪರಿಹಾರವಾಗಿ 49 ಕೋಟಿ ರೂ. ಠೇವಣಿ ಮಾಡಿದ್ದು, ಬಳಕೆ ಮಾಡದಿರುವ ಜಾಗಕ್ಕೂ ಪರಿಹಾರ ಕೊಡುವುದಾದರೆ, 3,400 ಕೋಟಿ ರೂ. ನೀಡಬೇಕಾಗುತ್ತೆ. ಇದು ರಾಜ್ಯದ ಬೊಕ್ಕಸಕ್ಕೆ ಹೊರೆಯಾಗಲಿದೆ. ಹೀಗಾಗಿ, ಸರ್ಕಾರ 15.7 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಬಯಸುತ್ತಿಲ್ಲ.
ಪ್ರಸ್ತುತ ಈ ಟಿಡಿಆರ್ ಪ್ರಕಾರ 462 ಎಕರೆಗಳಷ್ಟು ಸಂಪೂರ್ಣ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಹೋದರೆ ರಾಜ್ಯದ ಬೊಕ್ಕಸಕ್ಕೆ 1 ಲಕ್ಷ ಕೋಟಿ ರೂ.ಗೂ ಹೆಚ್ಚಿನ ಹೊರೆ ಬೀಳಲಿದೆ ಎಂದು ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ಹೇಳಿದ್ದಾರೆ.