ಹೊಸದಿಗಂತ ಡಿಜಿಟಲ್ ಡೆಸ್ಕ್:
ಗ್ರೇಟರ್ ಬೆಂಗಳೂರು(ಆಡಳಿತ) ಕಾಯ್ದೆಯಡಿ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶಿಸಿದೆ.
ಈ ಕುರಿತಂತೆ ಗ್ರೇಟರ್ ಬೆಂಗಳೂರು (ಆಡಳಿತ) ಕಾಯ್ದೆಯಡಿ ಭೂಸ್ವಾಧೀನವನ್ನು ಪ್ರಶ್ನಿಸಿ ರಾಜಗೋಪಾಲ ಗೋಪಾಲಕೃಷ್ಣ ಎಂಬುವರು ಹೈಕೋರ್ಟ್ ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠವು ನೋಟಿಸ್ ಆಧರಿಸಿ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶಿಸಿದೆ.
ಅರ್ಜಿದಾರರ ಬಿಡದಿ ಜಮೀನುಸ್ವಾಧೀನಕ್ಕೆ ಅಡ್ಡಿಪಡಿಸದಂತೆಯೂ ಹೈಕೋರ್ಟ್ ಆದೇಶದಲ್ಲಿ ತಿಳಿಸಿದೆ. ಅಲ್ಲದೇ ರಾಜ್ಯ ಸರ್ಕಾರ, ನಗರಾಭಿವೃದ್ಧಿ ಇಲಾಖೆಗೆ ಹೈಕೋರ್ಟ್ ನೋಟಿಸ್ ನೀಡಿದೆ.
11 ಸಾವಿರ ಎಕರೆ ಕಾನೂನು ಬಾಹಿರ ಭೂಸ್ವಾಧೀನಕ್ಕೆ ಸರ್ಕಾರ ಮುಂದಾಗಿದೆ. ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸದೇ ಭೂಸ್ವಾಧೀನ ಮಾಡಲಾಗುತ್ತಿದೆ. ಪರಿಸ ಅನುಮತಿ ಕೂಡ ಪಡೆದಿಲ್ಲ ಎಂಬುದಾಗಿ ಅರ್ಜಿದಾರರ ಪರ ವಕೀಲ ಸದಾನಂದ ಜಿ ಶಾಸ್ತ್ರಿ ವಾದಿಸಿದ್ದರು.
ಈ ವಾದವನ್ನು ಆಲಿಸಿದ ಹೈಕೋರ್ಟ್ ನ್ಯಾಯಪೀಠವು ಜುಲೈ.29ರಂದು ಪ್ರತಿಕ್ರಿಯಿಸುವಂತೆ ಸರ್ಕಾರಕ್ಕೆ ನೋಟಿಸ್ ನೀಡಿ ಅರ್ಜಿಯನ್ನು ಮುಂದೂಡಿದೆ.