ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಮನಗರದ ಬಿಡದಿ ಬಳಿಯ ಕೇತಗಾನಹಳ್ಳಿ ಬಳಿ ಕೇಂದ್ರ ಸಚಿವ HD ಕುಮಾರಸ್ವಾಮಿ ವಿರುದ್ಧ 6 ಎಕರೆ ಒತ್ತುವರಿ ಸಂಬಂಧ ಸ್ಥಳೀಯ ತಹಸೀಲ್ದಾರ್ ನೀಡಿರುವ ನೋಟಿಸ್ ಪ್ರಶ್ನಿಸಿ ಎಚ್.ಡಿ. ಕುಮಾರಸ್ವಾಮಿ ಹೈ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾ.ಎನ್ ಎಸ್ ಸಂಜಯ್ ಗೌಡ ಅವರಿದ್ದ ಹೈಕೋರ್ಟ್ ಪೀಠವಿಚಾರಣೆ ನಡೆಸಿತು.
ಈ ವೇಳೆ ನ್ಯಾಯಧೀಶರು ಅರ್ಜಿ ವಿಚಾರಣೆ ಏಪ್ರಿಲ್ 8ಕ್ಕೆ ಹೈಕೋರ್ಟ್ ಮುಂದೂಡಿತು. ಅಲ್ಲಿಯವರೆಗೂ ಮಧ್ಯಂತರ ರಿಲೀಫ್ ವಿಸ್ತರಿಸಿ ಹೈ ಕೋರ್ಟ್ ಆದೇಶ ಹೊರಡಿಸಿದೆ.
ಎಚ್ ಡಿ ಕುಮಾರಸ್ವಾಮಿ ಪರವಾಗಿ ಉದಯ ಹೊಳ್ಳ ಮತ್ತು ಎಂ.ವಿ ನಿಶಾಂತ್ ವಾದ ಮಂಡಿಸಿದರು.