August 28, 2026
Friday, August 28, 2026
spot_img

ಲ್ಯಾಂಡ್ ಫಾರ್ ಜಾಬ್ ಹಗರಣ: ಲಾಲು ಪ್ರಸಾದ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಲು ಹೈಕೋರ್ಟ್ ನಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಹಾರದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಲ್ಯಾಂಡ್ ಫಾರ್ ಜಾಬ್ ಹಗರಣ ಸಂಬಂಧ ರಾಷ್ಟ್ರೀಯ ಜನತಾ ದಳಮುಖ್ಯಸ್ಥ ಲಾಲು ಪ್ರಸಾದ್ ಯಾದವ್​ ವಿರುದ್ಧ ಸಿಬಿಐ ದಾಖಲಿಸಿದ್ದ ಎಫ್‌ಐಆರ್ ಮತ್ತು ಆರೋಪಪಟ್ಟಿಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಸಿಬಿಐ ಸಲ್ಲಿಸಿದ್ದ ಮೂರು ಪ್ರತ್ಯೇಕ ಆರೋಪಪಟ್ಟಿಗಳನ್ನು ಪ್ರಶ್ನಿಸಿ ಲಾಲು ಯಾದವ್ ನ್ಯಾ ಕೋರ್ಟ್ ಮೊರೆ ಹೋಗಿದ್ದು, ನ್ಯಾಯಮೂರ್ತಿ ರವೀಂದರ್ ದುಡೇಜಾ ಅವರಿದ್ದ ಏಕಸದಸ್ಯ ಪೀಠವು ಈ ಅರ್ಜಿಯಲ್ಲಿ ಯಾವುದೇ ಬಲವಾದ ಕಾನೂನು ಆಧಾರಗಳಿಲ್ಲ ಎಂದು ಹೇಳಿ ವಜಾಗೊಳಿಸಿದೆ.

2004 ರಿಂದ 2009ರ ಅವಧಿಯಲ್ಲಿ ಲಾಲೂ ಪ್ರಸಾದ್ ಯಾದವ್ ಕೇಂದ್ರ ರೈಲ್ವೆ ಸಚಿವರಾಗಿದ್ದ ಸಮಯ ರೈಲ್ವೆಯ ಗ್ರೂಪ್-ಡಿ ಹುದ್ದೆಗಳಿಗೆ ನೇಮಕಾತಿಗಾಗಿ ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಆರೋಪವಿದೆ. ಕೆಲಸ ಕೊಡಿಸುವಭರವಸೆ ನೀಡಿ ಅಭ್ಯರ್ಥಿಗಳಿಂದ ಮತ್ತು ಅವರ ಕುಟುಂಬದವರಿಂದ ಕಡಿಮೆ ದರದಲ್ಲಿ ಜಮೀನನ್ನು ಲಾಲೂ ಕುಟುಂಬ ತಮ್ಮ ಹೆಸರಿಗೆ ಬರೆಯಿಸಿಕೊಂಡಿದೆ ಎನ್ನುವುದು ಕೇಂದ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯದ ಆರೋಪಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !