ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸರ್ಕಾರ ಮತ್ತು ವಕ್ಫ್ ಬೋರ್ಡ್ ಲ್ಯಾಂಡ್ ಜಿಹಾದ್ ಅನ್ನು ಪ್ರಾರಂಭಿಸಿದೆ ಮತ್ತು ಬಡ ರೈತರಿಂದ ಭೂಮಿಯನ್ನು ಕಸಿದುಕೊಳ್ಳಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡಲೇ ಸ್ಪಷ್ಟನೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಬಂದ ನಂತರ ಇಡೀ ಕರ್ನಾಟಕ ಒಂದೇ ಸಮುದಾಯಕ್ಕೆ ಸೇರಿದ್ದು ಎಂಬಂತೆ ಆಡುತ್ತಿದೆ. ಕಾಂಗ್ರೆಸ್‌ನ ತುಷ್ಟೀಕರಣದಿಂದಾಗಿ ಹಿಂದೂಗಳ ಮೇಲೆ ಹಲ್ಲೆಯಾಗಿದೆ. ಈಗ ವಿಜಯಪುರ ಜಿಲ್ಲೆಯ ಹೊನವಾಡ ಗ್ರಾಮದಲ್ಲಿ ಸುಮಾರು 12 ಸಾವಿರ ಎಕರೆ ಹಾಗೂ ಇಡೀ ಜಿಲ್ಲೆಯಲ್ಲಿ ಒಟ್ಟಾರೆಯಾಗಿ 15 ಸಾವಿರ ಎಕರೆ ಭೂಮಿ ಕಬಳಿಸಲು ವಕ್ಫ್ ಬೋರ್ಡ್ ಯೋಜನೆ ರೂಪಿಸಿದೆ. ಇದು ಸ್ಪಷ್ಟವಾಗಿ ಸರ್ಕಾರದಿಂದಲೇ ನಡೆಯುತ್ತಿರುವ ಲ್ಯಾಂಡ್ ಜಿಹಾದ್ ಎಂದು ಅಶೋಕ್ ವಾಗ್ದಾಳಿ ನಡೆಸಿದ್ದಾರೆ.